Home ಚಿತ್ರದುರ್ಗ KSOU Admission 2026: ಕರ್ನಾಟಕ ಮುಕ್ತ ವಿವಿ ಪ್ರವೇಶಾತಿ ಆರಂಭ; ಶುಲ್ಕ ರಿಯಾಯಿತಿ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ
ಚಿತ್ರದುರ್ಗ

KSOU Admission 2026: ಕರ್ನಾಟಕ ಮುಕ್ತ ವಿವಿ ಪ್ರವೇಶಾತಿ ಆರಂಭ; ಶುಲ್ಕ ರಿಯಾಯಿತಿ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ

Share
Share

ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026-27ನೇ ಶೈಕ್ಷಣಿಕ ಸಾಲಿನ ಜುಲೈ ಅವೃತ್ತಿ ಪ್ರಥಮ ವರ್ಷದ B.A, B.Com, B.Sc., B.Lib.I.Sc., B.C.A., B.B.A, B.S.W,  M.A, M.Com, M.A.-M.C.J., M.Lib.I.Sc., M.B.A., M.Sc., M.C.A., M.S.W.ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate  ಕೋರ್ಸ್‍ಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2026ರ ಜೂನ್ 22 ರಿಂದ ಪ್ರಾರಂಭವಾಗಿರುತ್ತದೆ.

ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/StudentHome.aspx] ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿರುತ್ತದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಶೇ.50ಕ್ಕೂ ಹೆಚ್ಚಿನ ದೃಷ್ಠಿ ದೋಷವುಳ್ಳ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕರಾದ ಡಾ.ಕೆ.ಪಿ.ಮಹಾಲಿಂಗಯ್ಯರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 9738014893, 7204352581, 9008905457, 8310111244, 9972499704, 7090762378 ಗೆ ಕರೆ ಮಾಡುವುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Loading News...

More News

Related Articles

ಚಿತ್ರದುರ್ಗ: ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ಪ್ರಶಸ್ತಿ’ ಪ್ರದಾನ; ನಾಲ್ವರು ಗಣ್ಯರಿಗೆ ಗೌರವ

ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ...

ಚಿತ್ರದುರ್ಗ ನೀರಾವರಿ ಹೋರಾಟ: ‘ಮುಕ್ತವಿಚಾರ ವೇದಿಕೆ’ಯ ಭದ್ರಾ ಮೇಲ್ದಂಡೆ ಚಳವಳಿಯ ಇತಿಹಾಸ

ಬರಹ: ಗೌನಹಳ್ಳಿ ಗೋವಿಂದಪ್ಪ ಚಿತ್ರದುರ್ಗ: ಏಳುಸುತ್ತಿನಕೋಟೆಯ ಗತ್ತು ಇದೆ, ಕಲ್ಲಿನ ಗೋಡೆಗಳಲ್ಲಿ ಅಡಗಿರುವ ರಣ ಕಲಾವಿದರ...

ಚಿತ್ರದುರ್ಗದ ಮೂರು ತಾಲ್ಲೂಕುಗಳು ಶೀಘ್ರವೇ ಬರ ಪಟ್ಟಿಗೆ ಸೇರ್ಪಡೆ: ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ

ಚಿತ್ರದುರ್ಗ (Chitradurga Live News): ಜಿಲ್ಲೆಯ ಬಿಟ್ಟುಹೋಗಿರುವ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳು ಮುಂದಿನ...

ಕೋಟೆನಾಡಿಗೆ ಮತ್ತೊಂದು ಗರಿ: ಕುವೆಂಪು ಭಾಷಾ ಭಾರತಿ ಪ್ರಶಸ್ತಿಗೆ ಡಾ.ಬಂಜಗೆರೆ ಜಯಪ್ರಕಾಶ್ ಆಯ್ಕೆ

ಚಿತ್ರದುರ್ಗ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಚಿತ್ರದುರ್ಗದ ಹೆಮ್ಮೆಯ...