Home ಅಪ್ಪರ್ ಭದ್ರಾ ಯೋಜನೆ ನವೆಂಬರ್‌ನೊಳಗೆ ಪೂರ್ಣ: ಸಚಿವ ಚಲುವರಾಯಸ್ವಾಮಿ
Homeರಾಜ್ಯ

ಅಪ್ಪರ್ ಭದ್ರಾ ಯೋಜನೆ ನವೆಂಬರ್‌ನೊಳಗೆ ಪೂರ್ಣ: ಸಚಿವ ಚಲುವರಾಯಸ್ವಾಮಿ

Share
n Chaluvarayaswamy
Share

ಬೆಂಗಳೂರು, ಆ.21: ಅಪ್ಪರ್ ಭದ್ರಾ ಯೋಜನೆ ಕಾಮಗಾರಿಯನ್ನು ನವೆಂಬರ್ ಅಥವಾ ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ವಿಧಾನಪರಿಷತ್ತಿಗಿಂದು ತಿಳಿಸಿದರು.

ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಈ ಯೋಜನೆಯ ಮೂಲ ಅದಾಜು ರೂ.12,340 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.21,473.67 ಕೋಟಿಗಳ ಮೊತ್ತದ ಪುನರ್ ಪರಿಷ್ಕತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 2026-27ನೇ ಸಾಲಿನಲ್ಲಿ ರೂ.1042.29 ಕೋಟಿಗಳ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.

ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಒಟ್ಠಾರೆ 29.90 ಟಿ.ಎಂ.ಸಿ ನೀರನ್ನು ಬಳಸಿಕೊಂಡು ಚಿತ್ರದುರ್ಗ ಹಾಗೂ ತುಮಮಕೂತು ಶಾಖಾ ಕಾಲುವೆಗಳ ಮೂಲಕ ಚಿಕ್ಕಮಗಳೂತು, ಚಿಯ್ರದುರ್ಗ, ತುಮಖರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ 2,25,515 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಜಾಗೂ 367 ಕೆರೆಗಳನ್ನು ಭರ್ತಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದ್ದು, ಯೋಜನೆ ಪೂರ್ಣಗೊಂಡರೆ 2,25,515 ಹೆಕ್ಟೇರ್ ಪ್ರದೇಶದ ರೈತರಿಗೆ ಅನುಕೂಲವಾಗುತ್ತದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Loading News...

More News

Related Articles

ಮಠಾಧೀಶರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೌಹಾರ್ದಯುತ ಸಮಾಲೋಚನೆ: ಸಮುದಾಯಗಳ ಬೇಡಿಕೆಗಳ ಕುರಿತು ಚರ್ಚೆ

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಶೋಷಿತ ಸಮಾಜಗಳಿಗೆ ಸೇರಿದ ಪ್ರಮುಖ ಮಠಾಧೀಶರು ಇಂದು...

ಸೋನಿಯಾ ಗಾಂಧಿ ಪ್ರೇಮಕತೆ, ರಹಸ್ಯಗಳ ಅನಾವರಣ: ನ.10ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಪುಸ್ತಕ!

ಸೋನಿಯಾ ಗಾಂಧಿ ಪ್ರೇಮಕತೆ: ಹುಟ್ಟಿದ್ದು ಇಟಲಿ, ಬೆಳೆದಿದ್ದು ಅಲ್ಲೇ, ಓದಿದ್ದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ. ಎಲ್ಲಿಯೋ ಚಿಗುರಿದ...

ಕುಟುಂಬ ಸಮೇತ ಭೋವಿ ಗುರುಪೀಠಕ್ಕೆ ಭೇಟಿ ನೀಡಿದ ನೂತನ ಸಚಿವ ವಿಜಯಾನಂದ ಕಾಶಪ್ಪನವರ

ಬಾಗಲಕೋಟೆ: ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಇಳಕಲ್ಲಿನ ಜನಪ್ರಿಯ ನಾಯಕ ಶ್ರೀ ವಿಜಯಾನಂದ...

ನಿವೃತ್ತ ಸಿದ್ದರಾಮಯ್ಯ’ ವರವೋ, ಶಾಪವೋ..!? | Karnataka Congress Politics

ಸುಭಾಷ್ ಹೂಗಾರ ಮೂರನೇ ಮಹಡಿ | ಸಂಯುಕ್ತ ಕರ್ನಾಟಕ ಕೈ ಕಾಲು ಗಟ್ಟಿ ಇರುವ, ರಟ್ಟೆಯಲ್ಲಿ...