Home ರಾಜ್ಯ ಮಠಾಧೀಶರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೌಹಾರ್ದಯುತ ಸಮಾಲೋಚನೆ: ಸಮುದಾಯಗಳ ಬೇಡಿಕೆಗಳ ಕುರಿತು ಚರ್ಚೆ
ರಾಜ್ಯ

ಮಠಾಧೀಶರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೌಹಾರ್ದಯುತ ಸಮಾಲೋಚನೆ: ಸಮುದಾಯಗಳ ಬೇಡಿಕೆಗಳ ಕುರಿತು ಚರ್ಚೆ

Share
Share

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಶೋಷಿತ ಸಮಾಜಗಳಿಗೆ ಸೇರಿದ ಪ್ರಮುಖ ಮಠಾಧೀಶರು ಇಂದು ಗೃಹಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಮಹತ್ವದ ಭೇಟಿಯಲ್ಲಿ ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಹೊಸದುರ್ಗ ಕುಂಚಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ ಹಾಗೂ ಈಡಿಗ, ಕುಂಬಾರ, ಹಡಪದ, ಯಾದವ ಸೇರಿದಂತೆ ವಿವಿಧ ಸಮಾಜದ ಮಠಾಧೀಶರು ಉಪಸ್ಥಿತರಿದ್ದರು.

ಸಭೆಯಲ್ಲಿ ಆಯಾ ಸಮಾಜಗಳ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ, ಹಾಗೂ ಸಮುದಾಯಗಳ ವಿವಿಧ ಬೇಡಿಕೆಗಳ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು. ಈ ವೇಳೆ ಮಠಾಧೀಶರ ಸಲಹೆ ಮತ್ತು ಅಭಿಪ್ರಾಯಗಳನ್ನು ಆಲಿಸಿದ ಡಿ.ಕೆ. ಶಿವಕುಮಾರ್ ಅವರು, ಸಮಾಜದ ಹಿತಾಸಕ್ತಿ ಹಾಗೂ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Loading News...

More News

Related Articles

ಸೋನಿಯಾ ಗಾಂಧಿ ಪ್ರೇಮಕತೆ, ರಹಸ್ಯಗಳ ಅನಾವರಣ: ನ.10ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಪುಸ್ತಕ!

ಸೋನಿಯಾ ಗಾಂಧಿ ಪ್ರೇಮಕತೆ: ಹುಟ್ಟಿದ್ದು ಇಟಲಿ, ಬೆಳೆದಿದ್ದು ಅಲ್ಲೇ, ಓದಿದ್ದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ. ಎಲ್ಲಿಯೋ ಚಿಗುರಿದ...

ಕುಟುಂಬ ಸಮೇತ ಭೋವಿ ಗುರುಪೀಠಕ್ಕೆ ಭೇಟಿ ನೀಡಿದ ನೂತನ ಸಚಿವ ವಿಜಯಾನಂದ ಕಾಶಪ್ಪನವರ

ಬಾಗಲಕೋಟೆ: ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಇಳಕಲ್ಲಿನ ಜನಪ್ರಿಯ ನಾಯಕ ಶ್ರೀ ವಿಜಯಾನಂದ...

ಅಪ್ಪರ್ ಭದ್ರಾ ಯೋಜನೆ ನವೆಂಬರ್‌ನೊಳಗೆ ಪೂರ್ಣ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು, ಆ.21: ಅಪ್ಪರ್ ಭದ್ರಾ ಯೋಜನೆ ಕಾಮಗಾರಿಯನ್ನು ನವೆಂಬರ್ ಅಥವಾ ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು...

ನಿವೃತ್ತ ಸಿದ್ದರಾಮಯ್ಯ’ ವರವೋ, ಶಾಪವೋ..!? | Karnataka Congress Politics

ಸುಭಾಷ್ ಹೂಗಾರ ಮೂರನೇ ಮಹಡಿ | ಸಂಯುಕ್ತ ಕರ್ನಾಟಕ ಕೈ ಕಾಲು ಗಟ್ಟಿ ಇರುವ, ರಟ್ಟೆಯಲ್ಲಿ...