ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ನಾಗರಾಜ್ ಅವರ ತಾಯಿ ಲಕ್ಷ್ಮೀದೇವಿ (85) ಗುರುವಾರ ಸಂಜೆ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ನಗರದ ಜಿ.ಜಿ. ಸಮುದಾಯ ಭವನದ ಪಕ್ಕದಲ್ಲಿರುವ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಶುಕ್ರವಾರ ಪಾರ್ಥಿವ ಶರೀರವನ್ನು ಚಿತ್ರದುರ್ಗದಿಂದ ಅವರ ಸ್ವಗ್ರಾಮವಾದ ಬೀರೇನಹಳ್ಳಿಗೆ ತೆಗೆದುಕೊಂಡು ಹೋಗಲಾಗುವುದು. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಚಂದ್ರಪ್ಪ ಹಾಗೂ ನೂರಾರು ವಕೀಲರು ಸೇರಿ ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು, ಪ್ರಮುಖರು, ಮಠಾಧೀಶರು ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
-
ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.
ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.
ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.