Home ಚಿತ್ರದುರ್ಗ ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘದ ಅವಿರೋಧ ಆಯ್ಕೆ | Chitradurga Contractors Association
ಚಿತ್ರದುರ್ಗ

ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘದ ಅವಿರೋಧ ಆಯ್ಕೆ | Chitradurga Contractors Association

Share
Share

ಚಿತ್ರದುರ್ಗ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ತಾಲ್ಲೂಕು ಗುತ್ತಿಗೆದಾರ ಸಂಘದ ಪ್ರಮುಖ ಸ್ಥಾನಗಳಿಗೆ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಮಧ್ಯಪ್ರವೇಶದಿಂದ ಅವಿರೋಧ ಆಯ್ಕೆ ನಡೆಯಿತು.

ಜಾನಕೊಂಡ ಮಾರ್ಗದ ರಂಗನಾಥಸ್ವಾಮಿ ಬೆಟ್ಟದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ಆರ್.ಮಂಜುನಾಥ್ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವಿರೋಧ ಆಯ್ಕೆ ನಡೆಸಿದರು.

ಮೂರು ವರ್ಷಗಳ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ವಿವರ:

  • ಅಧ್ಯಕ್ಷರು: ಕಾಟೇಹಳ್ಳಿ ಕರಿಯಪ್ಪ

  • ಪ್ರಧಾನ ಕಾರ್ಯದರ್ಶಿ: ಮೈಲಾರಪ್ಪ

  • ಖಜಾಂಚಿ: ಪ್ರವೀಣ್

ಬಳಿಕ ಮಾತನಾಡಿದ ಮಂಜುನಾಥ್, “ಚುನಾವಣೆಗಳು ಪರಸ್ಪರ ದ್ವೇಷ, ಅಸೂಯೆಗೆ ಕಾರಣವಾಗುತ್ತದೆ. ಪರಸ್ಪರ ಒಗ್ಗೂಡಿ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಸುವುದರಿಂದ ಸಂಘದ ಬೆಳವಣಿಗೆಗೆ ಸಹಕಾರಿ ಆಗಲಿದೆ,” ಎಂದರು.

“ಗುತ್ತಿಗೆದಾರರ ಸಮಸ್ಯೆಗಳು ಅನೇಕ ಇವೆ. ಅವುಗಳನ್ನು ಬಗೆಹರಿಸಲು ತಾಲ್ಲೂಕು ಮಟ್ಟದಿಂದ ರಾಜ್ಯಮಟ್ಟದ ಘಟಕದವರೆಗಿನ ಪದಾಧಿಕಾರಿಗಳು ಒಗ್ಗೂಡಿ ಜವಾಬ್ದಾರಿ ನಿರ್ವಹಿಸಬೇಕು. ಸರ್ಕಾರದ ಮೇಲೆ ಒತ್ತಡ ತಂದು ಕಾಮಗಾರಿ ಬಾಕಿ ಹಣ ಬಿಡುಗಡೆಗೆ ಶ್ರಮಿಸಬೇಕಿದೆ,” ಎಂದು ತಿಳಿಸಿದರು.

ಮುಂದುವರಿದು, “ರಾಜ್ಯದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ವರ್ಗವೇ ಗುತ್ತಿಗೆದಾರರು. ಅವರ ಹಿತದ ಜೊತೆಗೆ ಕಾಮಗಾರಿ ನಡೆಸಿದ್ದಕ್ಕೆ ಪ್ರತಿಯಾಗಿ ಹಣ ಕಾಲಕಾಲಕ್ಕೆ ಸರ್ಕಾರ ನೀಡುವಂತೆ ಒತ್ತಡ ತರಬೇಕಿದೆ. ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಾನ್ಮುಖನಾಗಿದ್ದೇನೆ,” ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ.ಮಲ್ಲೇಶ್, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಭಾಷಾ, ರಮೇಶ್, ಲಕ್ಷ್ಮಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...