Home ಹೊಳಲ್ಕೆರೆ ಸಾವಯವ ಕೃಷಿ ಮತ್ತು ಸೋಲಾರ್ ಆಧಾರಿತ ಜೀವನೋಪಾಯ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ
ಹೊಳಲ್ಕೆರೆ

ಸಾವಯವ ಕೃಷಿ ಮತ್ತು ಸೋಲಾರ್ ಆಧಾರಿತ ಜೀವನೋಪಾಯ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ

Share
Share

ಚಿತ್ರದುರ್ಗ: ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ದಾವಣಗೆರೆ ಟೆಕ್ನೋಸರ್ವ್ ಸಂಸ್ಥೆ ಹಾಗೂ ಸೆಲ್ಕೋ ಸಂಸ್ಥೆ ವತಿಯಿಂದ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿಯ ರಂಗಾಪುರ ಗುರುಕುಲದಲ್ಲಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9.30ಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಆಸಕ್ತ ರೈತರಿಗೆ ಸಾವಯವ ಕೃಷಿ ಹಾಗೂ ಸೌರಶಕ್ತಿ ಆಧಾರಿತ ಜೀವನೋಪಾಯ ಚಟುವಟಿಕೆಗಳ ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಾವಣಗೆರೆಯ ಟೆಕ್ನೋಸರ್ವ್ ಸಂಸ್ಥೆಯ ಶ್ರೀಕಾಂತ್ ಭಟ್, ಅವಿನಾಶ್ ಹಾಗೂ ಮುರುಗೇಶ್ ರವರು ಬಯೋಡೈಜೆಸ್ಟರ್ ಆಧಾರಿತ ಜೀವಾಮೃತ ಘಟಕ ಕುರಿತು ಮಾಹಿತಿ ನೀಡುವರು. ಹೊಳಲ್ಕೆರೆ ತಾಲೂಕಿನ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಂದ ಪೌಷ್ಟಿಕ ಕೈತೋಟದ ಮಹತ್ವ ಕುರಿತು ರೈತರಿಗೆ ಮಾಹಿತಿ ನೀಡಲಾಗುವುದು.

ವಡೆಯರಹಳ್ಳಿಯ ಪ್ರಗತಿಪರ ರೈತರಾದ ಭೈರೇಶ್ ಅವರು ಜೇನು ಕೃಷಿಯ ಕುರಿತು, ಹಿರಿಯೂರು ತಾಲೂಕಿನ ಗೌಡನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ಕರಿಯಪ್ಪ ಅವರು ಎರೆಹುಳು ಗೊಬ್ಬರ ತಯಾರಿಕೆ ಕುರಿತು ತಮ್ಮ ಅನುಭವವನ್ನು ಹಂಚಿಕೊಳ್ಳುವರು.
ಸೆಲ್ಕೋ ಸಂಸ್ಥೆ ಚಿತ್ರದುರ್ಗದ ಅಜ್ಜಯ್ಯ ಬಿ ರವರು ಸೌರಶಕ್ತಿ ಆಧಾರಿತ ಜೀವನೋಪಾಯ ಚಟುವಟಿಕೆಗಳು, ಸೂರ್ಯಘರ್ ಯೋಜನೆ ಮತ್ತು ಸೋಲಾರ್ ಚಾಲಿತ ಪಂಪ್ಸೆಟ್ ಕುರಿತು ಮಾಹಿತಿ ನೀಡುವರು. ಆದ ಪ್ರಯುಕ್ತ ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಬಬ್ಬೂರುಫಾರಂ  ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಮನವಿ ಮಾಡಲಾಗಿದೆ. ತರಬೇತಿಯಲ್ಲಿ ಭಾಗವಹಿಸುವ ರೈತರಿಗೆ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ರಂಗಾಪುರ ಗುರುಕುಲದಲ್ಲಿ ಮಾಡಲಾಗಿದೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಹೊಳಲ್ಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಪರ ಸಭೆ: ಸಚಿವರು, ಮುಖಂಡರ ಭಾಗಿ

ಹೊಳಲ್ಕೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶಿ ಹುಲಿಕುಂಟೆ...

ಹೊಳಲ್ಕೆರೆ: ಜಮೀನಿನ ಗುಡಿಸಲಿನಲ್ಲಿ ವೃದ್ಧನ ಶವ ಪತ್ತೆ; ಕೊಲೆ ಶಂಕೆ

ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ...

ಹೊಳಲ್ಕೆರೆಯಲ್ಲಿ ಕೋಟಿ ಕೋಟಿ ಲೂಟಿ: ತನಿಖೆಗೆ ಎಚ್. ಆಂಜನೇಯ ಆಗ್ರಹ

ಚಿತ್ರದುರ್ಗ, ಸೆ.21: ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರವನ್ನು ಅಧಿಕಾರಿಗಳು ನಡೆಸಿದ್ದು, ಈ ಹಿನ್ನೆಲೆಯಲ್ಲಿ...

ಹೊಳಲ್ಕೆರೆಯಲ್ಲಿ ಚಿನ್ನಾಭರಣ ಕಳ್ಳತನ

ಹೊಳಲ್ಕೆರೆ: ತಾಲ್ಲೂಕಿನ ಈಚ್ಗಟ್ಟ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಹಾಡು ಹಗಲೇ...