Home ಚಿತ್ರದುರ್ಗ ಭದ್ರಾ ನೀರಿಗೆ ಸ್ವಾಗತ: ಲಕ್ಷ ಸಿಹಿ ವಿತರಣೆ
ಚಿತ್ರದುರ್ಗ

ಭದ್ರಾ ನೀರಿಗೆ ಸ್ವಾಗತ: ಲಕ್ಷ ಸಿಹಿ ವಿತರಣೆ

Share
ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗಕ್ಕೆ ತಲುಪಿದ ಖುಷಿಯಲ್ಲಿ ಸೆ.13ರಂದು 1 ಲಕ್ಷ ಜನರಿಗೆ ಸಿಹಿ ವಿತರಿಸಲು ಭೋವಿ ಗುರುಪೀಠ ಸಜ್ಜಾಗಿದೆ. ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ.
Share

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದು ಬಂದ ಹಿನ್ನೆಲೆಯಲ್ಲಿ ಭೋವಿ ಗುರುಪೀಠದ ವತಿಯಿಂದ ಸೆ.13ರಂದು ಬೆಳಿಗ್ಗೆ 9 ಗಂಟೆಗೆ ಗೋನೂರು ಕೆರೆಗೆ ನೀರು ಸೇರುವ ಸ್ಥಳದಲ್ಲಿ ‘ಭದ್ರೆಗೆ ಬೃಹತ್ ಸಿಹಿ ಸಂಭ್ರಮ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು ಒಂದು ಲಕ್ಷ ಜನರಿಗೆ ಸಿಹಿ ವಿತರಿಸುವ ಮೂಲಕ ಭದ್ರಾ ನೀರನ್ನು ಸಂಭ್ರಮದಿಂದ ಸ್ವಾಗತಿಸಲಾಗುವುದು.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ. ಗೋವಿಂದಪ್ಪ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ , ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಭಾಗವಹಿಸಲಿದ್ದಾರೆ.

ದಾಸೋಹ ಸೇವಾರ್ಥಿಗಳಾಗಿ ಹೊಳಲ್ಕೆರೆಯ ಹನುಮಂತಪ್ಪ ಗೋಡೆಮನೆ, ಚಳ್ಳಕೆರೆಯ ಎಚ್. ಆಂಜನೇಯ ಹಾಗೂ ಚಿತ್ರದುರ್ಗದ ಕಾರ್ಯನಿರ್ವಾಹಕ ಅಧಿಕಾರಿ ವೈ. ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ.

ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಭೋವಿ ಸಂಘ, ಎಸ್‌ಜೆಎಸ್ ಜ್ಞಾನಪೀಠ, ನೀರಾವರಿ ಹೋರಾಟಗಾರರು, ಪತ್ರಕರ್ತರು ಹಾಗೂ ಜಿಲ್ಲೆಯ ಸಮಸ್ತ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಭೋವಿ ಗುರುಪೀಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...