Home ಚಳ್ಳಕೆರೆ ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ
ಚಳ್ಳಕೆರೆ

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ

Share
ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ
ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ
Share

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆ ವೇಳೆ ನಗರದ ಬೀದಿಗಳಲ್ಲಿ ಡ್ಯಾನ್ಸ್ ಮಾಡಿದ ಶಿಕ್ಷಕರಿಗೆ ಕೂಡಲೇ ನೋಟಿಸ್ ಜಾರಿ ಮಾಡಿ, ಶಿಸ್ತುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಹಶೀಲ್ದಾರ್ ರೆಯಾನ್ ಪಾಷಾ ಅವರ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲೂಕಿನ ಕೊರಲಕುಂಟೆ ಗ್ರಾಮದ ರೈತ ರಕ್ಷಣಾ ವೇದಿಕೆ ಮತ್ತು ಸಾಂಸ್ಕೃತಿಕ ವೇದಿಕೆ, ಕನ್ನಡ ಸಾಂಸ್ಕೃತಿಕ ಸಂಸ್ಥೆ, ಪ್ರಜಾತತ್ವ ಮಾನವ ಹಕ್ಕುಗಳ ಆಯೋಗ ಫೌಂಡೇಷನ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ನೈತಿಕತೆ ಇಲ್ಲದ ಆಚರಣೆ: ಕೊರ್ಲಕುಂಟೆ ತಿಪ್ಪೇಸ್ವಾಮಿ

ಮನವಿ ಸಲ್ಲಿಸಿ ಮಾತನಾಡಿದ ಕರವೇ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ, “ತಾಲೂಕಿನಲ್ಲಿ ಪೋಕ್ಸೋ ಪ್ರಕರಣದಡಿ ಈಗಾಗಲೇ ಶಿಕ್ಷಕನೊಬ್ಬ ಜೈಲು ಸೇರಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಶಿಕ್ಷಣ ಇಲಾಖೆಗೆ ಶಿಕ್ಷಕರ ದಿನಾಚರಣೆ ಆಚರಿಸುವ ಯಾವುದೇ ನೈತಿಕ ಹಕ್ಕಿಲ್ಲ. ಮತ್ತೊಂದೆಡೆ ಮಳೆಯಿಲ್ಲದೆ ಇಡೀ ತಾಲೂಕು ತೀವ್ರ ಬರಗಾಲದ ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಶಿಕ್ಷಕರನ್ನು ಬೀದಿಯಲ್ಲಿ ಬೇಕಾಬಿಟ್ಟಿ ಡ್ಯಾನ್ಸ್ ಮಾಡಲು ಬಿಟ್ಟಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ವಿರುದ್ಧವೂ ಕ್ರಮ ಜರುಗಿಸಬೇಕು. ಕೆಲ ಶಿಕ್ಷಕರು ಶಾಲೆಗಳಿಗೆ ಮದ್ಯ ಸೇವಿಸಿ ಹೋಗುತ್ತಾರೆಂಬ ಸಾರ್ವಜನಿಕ ದೂರುಗಳಿದ್ದು, ಆಲ್ಕೋಹಾಲ್ ತಪಾಸಣೆ ನಡೆಸುವ ಕಟ್ಟುನಿಟ್ಟಿನ ಕ್ರಮ ಜಾರಿಯಾಗಬೇಕು. ಮುಂದಿನ ದಿನಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಶೈಕ್ಷಣಿಕ ವಿಚಾರಗೋಷ್ಠಿ ಹಾಗೂ ಸಭಾ ಕಾರ್ಯಕ್ರಮಕ್ಕೆ ಮಾತ್ರ ಸೀಮಿತಗೊಳಿಸಿ, ಮೆರವಣಿಗೆಯನ್ನು ರದ್ದುಪಡಿಸಬೇಕು” ಎಂದು ಒತ್ತಾಯಿಸಿದರು.

ಜನರ ಆಕ್ರೋಶಕ್ಕೆ ಕಾರಣವಾದ ವರ್ತನೆ: ರೆಡ್ಡಿಹಳ್ಳಿ ವೀರಣ್ಣ

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, “ವಿದ್ಯಾರ್ಥಿಗಳಿಗೆ ಶಿಸ್ತು, ಸಂಸ್ಕಾರ ಕಲಿಸಬೇಕಾದ ಗುರುಗಳು ಸಾರ್ವಜನಿಕ ರಸ್ತೆಯಲ್ಲಿ ಅಸಭ್ಯವಾಗಿ ಡ್ಯಾನ್ಸ್ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಶಿಕ್ಷಕರ ದಿನಾಚರಣೆಯ ಘನತೆಗೆ ಕಳಂಕ ತಂದಿರುವ ಇಂತಹ ಶಿಕ್ಷಕರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣದ ಮೌಲ್ಯ ಕುಸಿತ: ಎಚ್. ಸೈಯದ್

ಸಾಮಾಜಿಕ ಹೋರಾಟಗಾರ ಎಚ್. ಸೈಯದ್ ಮಾತನಾಡಿ, “ಶಿಕ್ಷಣ ಇಲಾಖೆಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಸಂಪೂರ್ಣ ಮಾಯವಾಗಿದೆ. ಶಿಕ್ಷಕರ ಇಂತಹ ಬೇಜವಾಬ್ದಾರಿ ನಡವಳಿಕೆ ಸರ್ಕಾರಿ ಶಾಲೆಗಳ ಅವನತಿಗೆ ದಾರಿ ಮಾಡಿಕೊಡುತ್ತದೆ. ಸಾರ್ವಜನಿಕರಲ್ಲಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ಇರುವ ಗೌರವಕ್ಕೆ ಧಕ್ಕೆ ತಂದವರ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಬೇಕು” ಎಂದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 

View this post on Instagram

 

A post shared by Chitradurga Live (@chitradurgalive)

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಜಪಾನ್ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಳ್ಳಕೆರೆಯ ವಿ. ರಾಧಾ ಆಯ್ಕೆ: 1,500 ಮೀಟರ್ ಓಟದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಅಥ್ಲೀಟ್

ಚಿತ್ರದುರ್ಗ: ಜಪಾನ್‌ನಲ್ಲಿ ಅಕ್ಟೋಬರ್ 17 ರಿಂದ 26 ರವರೆಗೆ ನಡೆಯಲಿರುವ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಿತ್ರದುರ್ಗ...

ಚಿತ್ರದುರ್ಗದಲ್ಲಿ ಭೀಕರ ಬರ: ಹಿರಿಯೂರು, ಚಳ್ಳಕೆರೆ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ರೈತರ ಕಣ್ಣೀರು

ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ...

ನಾಯಕನಹಟ್ಟಿ: ನಕಲಿ ಚಿನ್ನ, ಅಸಲಿ ನಷ್ಟ: ತೆಲಂಗಾಣದ ವ್ಯಕ್ತಿಗೆ 10 ಲಕ್ಷ ರೂ. ವಂಚನೆ

ಚಿತ್ರದುರ್ಗ (Chitradurga Live): ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ತೆಲಂಗಾಣ ಮೂಲದ ವ್ಯಕ್ತಿಯೊಬ್ಬರಿಗೆ ನಕಲಿ...

ಮಂತ್ರಾಲಯಕ್ಕೆ ಹೊರಟಿದ್ದ ವಾಹನ ಪಲ್ಟಿ: ಹಲವರಿಗೆ ಗಂಭೀರ ಗಾಯ

ಚಳ್ಳಕೆರೆ: ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟಿಟಿ ವಾಹನ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ...