Home ಚಿತ್ರದುರ್ಗ ಕಾಂಗ್ರೆಸ್ ಆಡಳಿತ ಶೂನ್ಯ | ಮೋದಿಗೆ ವಿದೇಶದಲ್ಲಿ‌ ರತ್ನಗಂಬಳಿ ಸ್ವಾಗತ | ಗೋವಿಂದ ಕಾರಜೋಳ
ಚಿತ್ರದುರ್ಗ

ಕಾಂಗ್ರೆಸ್ ಆಡಳಿತ ಶೂನ್ಯ | ಮೋದಿಗೆ ವಿದೇಶದಲ್ಲಿ‌ ರತ್ನಗಂಬಳಿ ಸ್ವಾಗತ | ಗೋವಿಂದ ಕಾರಜೋಳ

Share
Share

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅಂದರೆ ಸ್ಥಿರತೆ, ಭದ್ರತೆ ಹಾಗೂ ಸಾಧನೆ. ತಮ್ಮ ಸಾಧನೆಗಳನ್ನು ಮುಂದಿಟ್ಟು ಮತ ಕೇಳಿದ ಪ್ರಧಾನಿ ಮೋದಿಯವರು ಪ್ರಪಂಚದ ಎಲ್ಲ ದೇಶಗಳ ಜತೆ ಉತ್ತಮ ಬಾಂಧವ್ಯ, ವ್ಯವಹಾರ ಹೊಂದುವುದರ ಜೊತೆಗೆ ನೆರೆಹೊರೆ ರಾಷ್ಟ್ರಗಳಿಗೆ ನೆರವು ನೀಡಿದ್ದಾರೆ. ಕಳೆದ 25 ವರ್ಷಗಳಿಂದ ಯಾವುದೇ ಕಳಂಕವಿಲ್ಲದ, ಭ್ರಷ್ಟಾಚಾರ ರಹಿತ ಆಡಳಿತವನ್ನು ಅವರು ನೀಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದರಾದ ಗೋವಿಂದ ಕಾರಜೋಳ ತಿಳಿಸಿದರು.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಅವರ 25 ವರ್ಷಗಳ ಜನಸೇವೆಗೆ ಗೌರವಿಸುವ ಸಲುವಾಗಿ ಹಮ್ಮಿಕೊಂಡಿರುವ ಸೇವಾ ಕಾರ್ಯದ ಕುರಿತು ಹಾಗೂ ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲ ಆಗಿರುವ ಕುರಿತು ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು

ಬಡವರ ಕಲ್ಯಾಣವೇ ಮೋದಿಯವರ ಗುರಿ

ಪ್ರಧಾನಿ ನರೇಂದ್ರ ಮೋದಿಯವರು ಈ ದೇಶದ ಭರವಸೆಯಾಗಿದ್ದು, ಸೆ.17ರಿಂದ ಅ.17ರವರೆಗೆ ವಿಶಿಷ್ಟ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ನರೇಂದ್ರ ಮೋದಿ ಕಾಲದಲ್ಲಿ ಸಾಮಾಜಿಕ ಕಲ್ಯಾಣ, ಗರೀಬ್ ಕಲ್ಯಾಣ, ಅಕ್ಕಿ ವಿತರಣೆ, ಪಿಎಂ ಸ್ವನಿಧಿ, ವಿಶ್ವಕರ್ಮ ಯೋಜನೆ ಹಾಗೂ ಉಜ್ವಲ ಯೋಜನೆಯ ಮೂಲಕ ನೈಸರ್ಗಿಕ ಸಂಪತ್ತಿಗೆ ಕೊಡುಗೆ ನೀಡಿದ್ದಾರೆ.

14 ಕೋಟಿ ಶೌಚಾಲಯ ನಿರ್ಮಾಣ ಮಾಡಿ ಸ್ವಚ್ಛ ಭಾರತದ ಸಾಧನೆ ಮೆರೆದಿದ್ದಾರೆ. ಜನ ಔಷಧಿ ಮೂಲಕ ಶೇ.90 ರಷ್ಟು ಕಡಿಮೆ ದರದಲ್ಲಿ ಔಷಧಿ ದೊರೆಯುವಂತೆ ಮಾಡಿದ್ದಾರೆ. ಮೋದಿ ಪ್ರಧಾನಿ ಆಗುವ ಮುನ್ನ ರಾಷ್ಟ್ರ ಆರ್ಥಿಕತೆಯಲ್ಲಿ 14ನೇ ಸ್ಥಾನದಲ್ಲಿದ್ದೆವು. ಈಗ ಭಾರತ 4ನೇ ಸ್ಥಾನ ತಲುಪಿದ್ದು 3ನೇ ಸ್ಥಾನಕ್ಕೆ ದಾಪುಗಾಲು ಇಡುತ್ತಿದೆ.

ಈ ಹಿಂದೆ ಭಾರತ ಸಾಲ ಕೇಳಲು ಬರುತ್ತದೆಂಬ ಭಾವನೆ ವಿದೇಶಗಳಲ್ಲಿತ್ತು, ಆದರೆ ಈಗ ರತ್ನಗಂಬಳಿ ಹಾಸಿ ಮೋದಿಗೆ ಆಹ್ವಾನಿಸುತ್ತಿದ್ದಾರೆ ಎಂದು ಪ್ರಧಾನಿ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಮೋದಿ ಸರ್ಕಾರ ತಂತ್ರಜ್ಞಾನಕ್ಕೆ ಹೆಚ್ಚು ಆದ್ಯತೆ ನೀಡಿದೆ. ನೋಟ್ ಅಮಾನ್ಯದಿಂದ ನಕಲಿ ನೋಟ್ ಹಾವಳಿಗೆ ಬ್ರೇಕ್ ಬಿದ್ದಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಬೊಮ್ಮಾಯಿ ಕಾಲದಲ್ಲಿ ಶಿಕ್ಷಣ ನೀತಿ ಜಾರಿಯಲ್ಲಿತ್ತು, ಆದರೆ ಸಿದ್ಧರಾಮಯ್ಯ ಕಾಲದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಬ್ರೇಕ್ ಬಿದ್ದಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸದ ಹಿನ್ನೆಲೆ ಶಿಕ್ಷಣ ಕ್ಷೇತ್ರ ತ್ರಿಶಂಕು ಸ್ಥಿತಿಯಲ್ಲಿದೆ. ರಾಜ್ಯ ಸರ್ಕಾರಕ್ಕೆ ದೂರದೃಷ್ಟಿ ಇಲ್ಲದ ಕಾರಣ ವಿದ್ಯುತ್ ಅಭಾವ ಉಂಟಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 20 ಲಕ್ಷ ಜಾನುವಾರುಗಳಿವೆ. ಗೋಶಾಲೆ, ಮೇವು ಬ್ಯಾಂಕ್ ತೆರೆಯಲು, ಮೇವು ಹಾಗೂ ನೀರಿನ ವ್ಯವಸ್ಥೆ ಮಾಡಲು ನಾನು ಒತ್ತಾಯಿಸಿದ್ದೇನೆ. ಸರ್ಕಾರ ಕೇವಲ ಕಾಟಾಚಾರಕ್ಕೆ ಬರ ಘೋಷಣೆ ಮಾಡಿದ್ದು, ಒಂದೇ ಒಂದು ರೂಪಾಯಿ ಪರಿಹಾರಕ್ಕೆ ಕ್ರಮ ಕೈಗೊಂಡಿಲ್ಲ. ಗೋಶಾಲೆ ನಡೆಸುವ ಮಠಮಾನ್ಯಗಳಿಗೆ ಸಹಾಯ ಮಾಡಬೇಕು ಎಂದು ಆಗ್ರಹಿಸಿದರು.

ಸಿಎಂ ಮಾತು ಕಡಿಮೆ ಮಾಡಿ ಕೆಲಸ ಮಾಡಲಿ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದೆ. ಹಿರಿಯೂರು ವ್ಯಾಪ್ತಿಯಲ್ಲಿ ಹನಿ ನೀರಿಗೂ ಪರದಾಡುವ ಸ್ಥಿತಿಯಿದೆ. ಉಪಚುನಾವಣೆ ಕಾರಣಕ್ಕೆ ಕೆಲವರು ಗಿಮಿಕ್ ಮಾಡುತ್ತಿದ್ದಾರೆ. ವಿಬಿ ಜಿ ರಾಮ್ ಜಿ ಯೋಜನೆಯಡಿ ಪರಿಹಾರ ಕ್ರಮ ಕೈಗೊಳ್ಳಬಹುದು. ಕೂಡಲೇ ಬೆಳೆ ವಿಮೆ ನೀಡಬೇಕು ಹಾಗೂ ಬೆಳೆ ನಷ್ಟವಾದ ರೈತರ ಸಾಲಮನ್ನಾ ಮಾಡಬೇಕು.

ಸಿಎಂ ಡಿಕೆಶಿ ನೂರು ದಿನಗಳ ಸಾಧನೆ ಸಮಾವೇಶ ಮಾಡಿದರು, ಕೇವಲ ಬಿಳಿ ಕಾಗದದ ಮೇಲೆ ಸಹಿ ಮಾಡಿದರೆ ಸಾಧನೆ ಅಲ್ಲ. ಮುಖ್ಯಮಂತ್ರಿ ಮಾತು ಕಡಿಮೆ ಮಾಡಿ ಕೆಲಸ ಮಾಡಲಿ. ಸರ್ಕಾರದ ನೂರು ದಿನದ ಸಾಧನೆ ಶೂನ್ಯವಾಗಿದೆ. ಮಾತಿನಲ್ಲಿ ಮಂಟಪ ಕಟ್ಟಿ ಮನೆಗೆ ಹೋಗೋದು ಅಲ್ಲ. ರಾಜ್ಯದಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಿವೆ. ಕಾನೂನು ಸುವ್ಯವಸ್ಥೆ ಜವಾಬ್ದಾರಿ ಇರೋರಿಗೆ ಸಿಎಂ ಕಿವಿಹಿಂಡಿ ಹೇಳಬೇಕು ಎಂದು ಒತ್ತಾಯಿಸಿದರು.

ಭದ್ರಾ ಮೇಲ್ದಂಡೆಗೆ ಕೇಂದ್ರದ ಷರತ್ತು ಪೂರೈಸದ ರಾಜ್ಯ

ಯುಪಿಐ ಟ್ಯಾಕ್ಸ್ ನಿಂದ ಗ್ರಾಹಕರ ಮೇಲೆ ಹೊರೆ ಆಗಲ್ಲ. ಒಂದು ರಾಷ್ಟ್ರ ಒಂದು ತೆರಿಗೆ ಬಂದಾಗಲೂ ಹೀಗೆ ಹೇಳುತ್ತಿದ್ದರು, ಆದರೆ ಯಾವುದೇ ತೊಂದರೆ ಆಗಿಲ್ಲ. ಜನರಿಗೆ ಸಮಸ್ಯೆ ಆದರೆ ಬದಲಿಸುವುದಕ್ಕೆ ಸರ್ಕಾರಕ್ಕೆ ಅಧಿಕಾರವಿದೆ. ರಾಹುಲ್ ಗಾಂಧಿ ಹತಾಶರಾಗಿ ಟೀಕೆ ಮಾಡುತ್ತಾರೆ. ಕೋವಿಡ್ ಲಸಿಕೆ ಬಗ್ಗೆ ರಾಹುಲ್ ಗಾಂಧಿ ಹೇಳಿದಂತೆ ಕೇಳಲು ಆಗಲ್ಲ, ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ಸ್ಪಷ್ಟಪಡಿಸಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಿಸಿದ್ದು ನಿಜ. ಕೇಂದ್ರ ಸರ್ಕಾರ ಬಜೆಟ್ ನಲ್ಲೇ ಹಣ ಘೋಷಿಸಿದೆ. ಆದರೆ ಕೇಂದ್ರ ಸರ್ಕಾರದ ಕಂಡಿಷನ್ಸ್ ಅನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿಲ್ಲ. ರಾಷ್ಟ್ರೀಯ ಯೋಜನೆ ಎಂಬುದಾಗಿ ಘೋಷಿಸಿದರೆ ಕೇಂದ್ರಕ್ಕೆ ಹೊರೆಯಾಗಲಿದೆ. ವಿವಿಧ ರಾಜ್ಯಗಳಲ್ಲಿ ಅನೇಕ ಯೋಜನೆಗಳಿವೆ, ಎಲ್ಲವೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದರೆ ಹೊರೆಯಾಗುತ್ತದೆ. ಕೇಂದ್ರ ಘೋಷಿತ 5300 ಕೋಟಿ ರೂ ತರುವ ಪ್ರಯತ್ನದಲ್ಲಿದ್ದೇನೆ.

ರಾಜ್ಯ ಸರ್ಕಾರದ ಯೋಜನೆ ಪ್ರಾಮಾಣಿಕವಾಗಿ ಮಾಡಬೇಕು. ಕೇಂದ್ರದ ಬಜೆಟ್‍ನಲ್ಲಿ ಘೋಷಿತ ಹಣ ಕ್ಯಾರಿ ಓವರ್ ಆಗುತ್ತದೆ. ಮೋದಿ ಅವರು ಮಾತು ಕೊಟ್ಟಿದ್ದಾರೆ, ಖಂಡಿತ ಕೊಡುತ್ತಾರೆ ಎಂದು ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರುಗಳಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರಿಶ್, ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ನವೀನ ಚಾಲುಕ್ಯ, ಉಪಾಧ್ಯಕ್ಷ ಡಾ.ಸಿದ್ಧಾರ್ಥ ಗುಂಡಾರ್ಪಿ, ಬಸಮ್ಮ, ಸಂಪತ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...