Home ಚಿತ್ರದುರ್ಗ ಚಿತ್ರದುರ್ಗದ ರೈತರಿಗೆ ಸಿಹಿಸುದ್ದಿ: ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಮೋಟಾರ್ ಪಂಪ್ ವಿತರಣೆ ಆರಂಭ!
ಚಿತ್ರದುರ್ಗ

ಚಿತ್ರದುರ್ಗದ ರೈತರಿಗೆ ಸಿಹಿಸುದ್ದಿ: ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಮೋಟಾರ್ ಪಂಪ್ ವಿತರಣೆ ಆರಂಭ!

Share
Share

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಶಾಸಕರ ಹಾಗೂ ಸಾಂಸ್ಥಿಕ ಕೋಟಾದಡಿ ಆಯ್ಕೆಯಾದ ಹಿರಿಯೂರು ಮತ್ತು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಒಟ್ಟು 13 ಫಲಾನುಭವಿಗಳಿಗೆ ಮೋಟಾರ್ ಪಂಪ್ ಹಾಗೂ ಬಿಡಿಭಾಗಗಳನ್ನು ಶನಿವಾರ ವಿತರಿಸಲಾಯಿತು.

ನಗರದ ಚಳ್ಳಕೆರೆ ರಸ್ತೆಯ ಶ್ರೀರಾಮ ಕಲ್ಯಾಣ ಮಂಟಪದ ಆವರಣದಲ್ಲಿ ಫಲಾನುಭವಿಗಳಿಗೆ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಗಂಗಾ ಕಲ್ಯಾಣ ಯೋಜನೆಯಡಿ ಹಿರಿಯೂರು ತಾಲ್ಲೂಕಿನ 8 ಹಾಗೂ ಚಳ್ಳಕೆರೆ ತಾಲ್ಲೂಕಿನ 5 ಫಲಾನುಭವಿಗಳಿಗೆ ಈಗಾಗಲೇ ಕೊಳವೆಬಾವಿ ಕೊರೆಸಲಾಗಿದ್ದು, ನೀರು ಲಭ್ಯವಾಗಿರುವುದು ಖಚಿತವಾಗಿದೆ. ವಿದ್ಯುತ್ ಸಂಪರ್ಕವೂ ದೊರೆತಿದ್ದು, ರೈತರು ಕೃಷಿ ಚಟುವಟಿಕೆಗೆ ತಕ್ಷಣವೇ ನೀರು ಬಳಸಿಕೊಳ್ಳಲು ಅನುಕೂಲವಾಗುವಂತೆ ಸಾಂಕೇತಿಕವಾಗಿ ಮೋಟಾರ್ ಪಂಪ್ ಮತ್ತು ಬಿಡಿಭಾಗಗಳನ್ನು ವಿತರಿಸಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 122 (ಶಾಸಕರ ಕೋಟಾ 36, ಸಾಂಸ್ಥಿಕ ಕೋಟಾ 34 ಹಾಗೂ ನಿಗಮದ ಅಧ್ಯಕ್ಷರು ಮತ್ತು ನಿರ್ದೇಶಕರ ಕೋಟಾ 52 ಸೇರಿ) ಫಲಾನುಭವಿಗಳಿಗೆ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಇದರ ಜೊತೆಗೆ ನೇರ ಸಾಲ ಯೋಜನೆಯಡಿ 434 ಜನರಿಗೆ, ಉದ್ಯಮಶೀಲತೆ ಅಭಿವೃದ್ಧಿ ಯೋಜನೆಯಡಿ 41 ಜನರಿಗೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 111 ಜನರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯ ಆರೂ ತಾಲ್ಲೂಕುಗಳಿಗೆ ನಿಗಮದ ಯೋಜನೆಗಳು ಹೆಚ್ಚಿನ ಪ್ರಮಾಣದಲ್ಲಿ ತಲುಪುತ್ತಿವೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಿಗಮದ ಜಿಲ್ಲಾ ವ್ಯವಸ್ಥಾಪಕ ರವಿಕುಮಾರ್ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...