Home ಹಿರಿಯೂರು ಹಿರಿಯೂರಿನ ಸೂರಗೊಂಡಹಳ್ಳಿ, ತವಂದಿ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ ಪರಿಶೀಲನೆ
ಹಿರಿಯೂರು

ಹಿರಿಯೂರಿನ ಸೂರಗೊಂಡಹಳ್ಳಿ, ತವಂದಿ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ ಪರಿಶೀಲನೆ

Share
ಹಿರಿಯೂರಿನ ಆದಿರಾಳು ಬಳಿ ಭದ್ರಾ ನೀರಿಗೆ ಬಾಗಿನ ಅರ್ಪಿಸಿದ ಸಚಿವರಾದ ಚಲುವರಾಯಸ್ವಾಮಿ ಮತ್ತು ರಘುಮೂರ್ತಿ
ಹಿರಿಯೂರು ತಾಲ್ಲೂಕಿನ ಆದಿರಾಳು ಗೋಕಟ್ಟೆ ಬಳಿ ಭದ್ರಾ ನದಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ ಸಚಿವರು
Share

ಚಿತ್ರದುರ್ಗ (ಸೆ.20): ಚಿತ್ರದುರ್ಗ ಜಿಲ್ಲೆಯ ರೈತರ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಪ್ರಾಯೋಗಿಕವಾಗಿ ಹಿರಿಯೂರು ತಾಲ್ಲೂಕಿನ ಹಲವು ಕೆರೆಗಳಿಗೆ ಭದ್ರಾ ನೀರು ಹರಿಸಲಾಗುತ್ತಿದೆ. ಇಂದು (ಸೆ. 20) ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಹಿರಿಯೂರು ತಾಲ್ಲೂಕಿನ ಆದಿರಾಳು ಗ್ರಾಮದ ಗೋಕಟ್ಟೆ ಬಳಿ ಭದ್ರಾ ನದಿಗೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ.

ಕೆರೆಗಳಿಗೆ ಜೀವಕಳೆ

ಚಿತ್ರದುರ್ಗ ಬ್ರಾಂಚ್ ಕೆನಾಲ್‌ ಮೂಲಕ ಪ್ರಾಯೋಗಿಕವಾಗಿ ಭದ್ರಾ ನೀರನ್ನು ಹರಿಸಲಾಗುತ್ತಿದೆ. ಕೆನಾಲ್‌ನ 87.740 ಕಿ.ಮೀ ಬಳಿಯ ಔಟ್ ಲೆಟ್ ನಿಂದ ನೈಸರ್ಗಿಕ ಹಳ್ಳದ ಮೂಲಕವೇ ಹಿರಿಯೂರು ತಾಲ್ಲೂಕಿನ ಸೂರಗೊಂಡಹಳ್ಳಿ ಹಾಗೂ ತವಂದಿ ಎರದಕಟ್ಟೆ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ.

ಒಟ್ಟು 17 ಕಿ.ಮೀ. ಉದ್ದದ ಈ ನೈಸರ್ಗಿಕ ಹಳ್ಳದ ಹಾದಿಯಲ್ಲಿ ಬರುವ ಕೆ.ಸಿ‌.ರೊಪ್ಪ, ಮಲ್ಲರಸನಹಟ್ಟಿ, ಆದಿರಾಳು, ಸಿ‌.ಎನ್.ಮಾಳಿಗೆ, ಹುಳಿ ತೊಟ್ಟಿಲು, ಸೂರಗೊಂಡಹಳ್ಳಿ ಹಾಗೂ ತವಂದಿ ಎರದಕಟ್ಟೆ ಸೇರಿದಂತೆ ಸುಮಾರು 6 ಚೆಕ್ ಡ್ಯಾಮ್, 3 ಗೋ ಕಟ್ಟೆಗಳು ಮತ್ತು ಹಲವು ಎಕರೆ ಕೃಷಿ ಭೂಮಿಗೆ ಭದ್ರಾ ನೀರು ಜೀವಕಳೆ ತುಂಬಲಿದೆ. ಇದು ಈ ಭಾಗದ ರೈತರಿಗೆ ಮತ್ತು ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲ ಕಲ್ಪಿಸಲಿದೆ.

Read: ಪಿಎಗಳ ಮಾತು ಕೇಳಿ ರಾಜಕೀಯ ಮುಗಿಸ್ಕೊಬೇಡ: ಬಿ. ಶ್ರೀರಾಮುಲುಗೆ ತಿಪ್ಪೇಸ್ವಾಮಿ ಖಡಕ್ ಎಚ್ಚರಿಕೆ

ಕಾಮಗಾರಿ ಪರಿಶೀಲನೆ

ಬಾಗಿನ ಅರ್ಪಿಸಿದ ಬಳಿಕ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೋವೇರಹಟ್ಟಿ ಬಳಿ ನಡೆಯುತ್ತಿರುವ ಭದ್ರಾ ಕೆನಾಲ್ ಕಾಮಗಾರಿಯನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಣ್ಯರ ಉಪಸ್ಥಿತಿ

ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಸಿ.ರಮೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾಧಿಕಾರಿ ಎಸ್.ರಮ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ರವಿಶಂಕರ್, ಅಧೀಕ್ಷಕ ಇಂಜಿನಿಯರ್ ಹರೀಶ್ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ: ಟೈರ್ ಸ್ಫೋಟಗೊಂಡು ಲಾರಿಗೆ ಕಾರು ಡಿಕ್ಕಿ, ಮೂವರು ಯುವಕರ ದುರ್ಮರಣ

ಹಿರಿಯೂರು: ಲಾರಿಯ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ...

ಚಿತ್ರದುರ್ಗದಲ್ಲಿ ಭೀಕರ ಬರ: ಹಿರಿಯೂರು, ಚಳ್ಳಕೆರೆ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ರೈತರ ಕಣ್ಣೀರು

ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ...

ವಿವಿ ಸಾಗರದಿಂದ ವೇದಾವತಿ ನದಿಗೆ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಹೈ ಅಲರ್ಟ್!

ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ (ವಿ.ವಿ. ಸಾಗರ) ಜಲಾಶಯದಿಂದ ವೇದಾವತಿ ನದಿಗೆ ಸೆಪ್ಟೆಂಬರ್ 19ರಿಂದ...

ಸೆ.17 ರಿಂದ ವಿ.ವಿ.ಸಾಗರ ಬಲದಂಡೆ ನಾಲೆಗೆ ನೀರು ಬಿಡುಗಡೆ: ಕಾಲುವೆ, ಹಳ್ಳಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ

ಚಿತ್ರದುರ್ಗ ಸೆ.16: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ಬಲದಂಡೆ ನಾಲೆಯ...