Home Nidana Varthe ಸಾಹಿತ್ಯ ಮತ್ತು ಶಿಕ್ಷಣ ಪ್ರೇಮಿ ಕೆ.ಎಂ.ವೀರೇಶ್ ಇನ್ನಿಲ್ಲ
Nidana Varthe

ಸಾಹಿತ್ಯ ಮತ್ತು ಶಿಕ್ಷಣ ಪ್ರೇಮಿ ಕೆ.ಎಂ.ವೀರೇಶ್ ಇನ್ನಿಲ್ಲ

Share
Share

ಚಿತ್ರದುರ್ಗ: ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಕೆ.ಎಂ. ವೀರೇಶ್ ಭಾನುವಾರ ತಡರಾತ್ರಿ ನಿಧನ ಹೊಂದಿದರು.

ಮೂಲತಃ ಸಾಹಿತ್ಯ, ಶಿಕ್ಷಣ ಪ್ರೇಮಿಯಾಗಿ ಗುರುತಿಸಿಕೊಂಡಿದ್ದ ಅವರು, ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಚಿತ್ರದುರ್ಗದಲ್ಲಿ 75ನೇ ಕನ್ನಡ ಸಾಹಿತ್ಯವನ್ನು 200ರಲ್ಲಿ ಅದ್ದೂರಿಯಾಗಿ ನಡೆಸುವಲ್ಲಿ ಶ್ರಮಿಸಿದ್ದರು.

ಶರಣ ಸಾಹಿತ್ಯ ಪರಿಷತ್ ಹಾಲಿ ಜಿಲ್ಲಾಧ್ಯಕ್ಷರಾಗಿ ಕನ್ನಡ ನಾಡು-ನುಡಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಕವಿತೆ, ಸಾಹಿತ್ಯ ಓದುವ ಹವ್ಯಾಸ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ಸಾಹಿತ್ಯಾಸಕ್ತಿ ಮೂಡಿಸುವುದು ಅವರ ಮುಖ್ಯ ಕಾಳಜಿ. ಚಿತ್ರದುರ್ಗದಲ್ಲಿ ನಡೆಯುವ ಸಾಹಿತ್ಯ ಸಂಭ್ರಮ, ಕವಿಗೋಷ್ಠಿ, ಪುಸ್ತಕ ಬಿಡುಗಡೆ, ರಂಗಭೂಮಿ ನಾಟಕೋತ್ಸವಗಳಂತಹ ಪ್ರತಿಯೊಂದು ಕಾರ್ಯಕ್ರಮದಲ್ಲೂ ಅವರ ಉಪಸ್ಥಿತಿ ಮತ್ತು ಮಾರ್ಗದರ್ಶನ ಇರುತ್ತದೆ. ಟಿ.ವಿ, ಮೊಬೈಲ್ ಹಾವಳಿಯಲ್ಲಿ ರಂಗಭೂಮಿ ಮತ್ತು ಪುಸ್ತಕ ಸಂಸ್ಕೃತಿ ಉಳಿಯಬೇಕು ಎಂಬುದು ಅವರ ನಿರಂತರ ಕರೆ.

ಶಿಕ್ಷಣ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರ. ನಗರದ ಹೊರವಲಯದ ಪ್ರತಿಷ್ಠಿತ ಬಾಪೂಜಿ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಯಾಗಿ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮಹಾತ್ಮ ಗಾಂಧೀಜಿಯವರ ಶಾಂತಿಯ ಮಾರ್ಗವನ್ನು ವಿದ್ಯಾರ್ಥಿಗಳಲ್ಲಿ ಬಿತ್ತುತ್ತಾ, ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸುವುದು ಕಾರ್ಯದಲ್ಲೊದ್ದರು.

ಸರಳ ಸಜ್ಜನಿಕೆ, ಸಾಹಿತಿಗಳಿಗೆ, ಕಲಾವಿದರಿಗೆ, ಪತ್ರಕರ್ತರಿಗೆ ಆತ್ಮೀಯವಾಗಿ ಸ್ಪಂದಿಸುವ ಗುಣ ಅವರನ್ನು ಎಲ್ಲರಿಗೂ ಹತ್ತಿರವಾಗಿಸಿದೆ. ಕನ್ನಡಪರ ಹೋರಾಟ, ಶರಣ ಸಾಹಿತ್ಯದ ಪ್ರಚಾರ, ಶೈಕ್ಷಣಿಕ ಸೇವೆ – ಹೀಗೆ ಎರಡೂ ಕ್ಷೇತ್ರದಲ್ಲಿ ಸಮಾನವಾಗಿ ಕೆಲಸ ಮಾಡುತ್ತಿದ್ದ ಕೆ.ಎಂ.ವೀರೇಶ್ ಅವರು ಚಿತ್ರದುರ್ಗ ಜಿಲ್ಲೆಯ ಹೆಮ್ಮೆಯ ಸಾಹಿತ್ಯ-ಶಿಕ್ಷಣ ಸೇವಕರಾಗಿದ್ದರು. ಅವರ ಅಗಲಿಕೆ ಜಿಲ್ಲೆಗೆ ಅತ್ಯಂತ ನಷ್ಟವನ್ನುಂಟು ಮಾಡಿದೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ವಕೀಲ ಉದಯಶಂಕರ್ ಪುತ್ರ ರವಿಶಂಕರ್ ನಿಧನ

ಚಿತ್ರದುರ್ಗ: ನಗರದ ಬುರುಜನಹಟ್ಟಿ ನಿವಾಸಿ ರವಿಶಂಕರ್‌ (43) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು...

ಚಿತ್ರದುರ್ಗ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ ನಿಧನ

ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ (56 ವರ್ಷ) ಬುಧವಾರ ಬೆಳಗ್ಗೆ (ಸೆ.16,...

ಹರಳಯ್ಯ ಶ್ರೀಗಳಿಗೆ ಪಿತೃ ವಿಯೋಗ: ಕೆ. ಲಕ್ಕಪ್ಪ ಲಿಂಗೈಕ್ಯ

ಚಿತ್ರದುರ್ಗ: ಐಮಂಗಲದ ಶ್ರೀ ಮಹಾಶಿವಶರಣ ಹರಳಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರ ಪೂರ್ವಾಶ್ರಮದ...

ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್.ನಾಗರಾಜ್ ಅವರ ತಾಯಿ ನಿಧನ

ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ನಾಗರಾಜ್ ಅವರ ತಾಯಿ ಲಕ್ಷ್ಮೀದೇವಿ (85)...