Home ಚಿತ್ರದುರ್ಗ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಡಾ. ಕೆ.ಎಂ. ವೀರೇಶ್ ನಿಧನಕ್ಕೆ ಎಸ್.ಜೆ.ಎಂ. ವಿದ್ಯಾಪೀಠ ಸಂತಾಪ
ಚಿತ್ರದುರ್ಗ

ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಡಾ. ಕೆ.ಎಂ. ವೀರೇಶ್ ನಿಧನಕ್ಕೆ ಎಸ್.ಜೆ.ಎಂ. ವಿದ್ಯಾಪೀಠ ಸಂತಾಪ

Share
Share
ಚಿತ್ರದುರ್ಗ: ನಗರದ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಪ್ರೇಮಿ ಡಾ. ಕೆ.ಎಂ. ವೀರೇಶ್ ಅವರ ನಿಧನಕ್ಕೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್, ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ-ಕಾಲೇಜುಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಡಾ. ವೀರೇಶ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಎಸ್.ಜೆ.ಎಂ. ವಿದ್ಯಾಪೀಠಕ್ಕೆ ಅಪಾರ ಕೊಡುಗೆ

ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಡಾ. ವೀರೇಶ್ ಅವರು ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ಶ್ರೀಮಠದ ಪರಮಭಕ್ತರಾಗಿದ್ದ ಅವರು ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದರು.
ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿದ್ದ ಕೀರ್ತಿ ಅವರಿಗೆ ಸಲ್ಲುತ್ತದೆ. ಅತ್ಯಂತ ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಡಾ. ವೀರೇಶ್ ಅವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ರಾಜ್ಯಮಟ್ಟದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನವನ್ನೂ ಯಶಸ್ವಿಯಾಗಿ ನಡೆಸಲಾಗಿತ್ತು.
ಬಾಪೂಜಿ ವಿದ್ಯಾಸಂಸ್ಥೆಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿ, ನೂರಾರು ಜನರಿಗೆ ಮಾರ್ಗದರ್ಶಕರಾಗಿದ್ದ ಡಾ. ಕೆ.ಎಂ. ವೀರೇಶ್ ಅವರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಭರಿಸುವ ಶಕ್ತಿಯನ್ನು ಬಸವಾದಿ ಪ್ರಮಥರು ಅವರ ಕುಟುಂಬ ವರ್ಗ, ಸಂಸ್ಥೆಯ ಸಿಬ್ಬಂದಿ ಹಾಗೂ ಅಪಾರ ಹಿತೈಷಿಗಳಿಗೆ ಕರುಣಿಸಲಿ ಎಂದು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಪ್ರಾರ್ಥಿಸಿದೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...