Home ಹೊಸದುರ್ಗ ಸೆ. 24ರಂದು ಭದ್ರಾ ನಾಲೆಗೆ ಸಿಎಂ ಡಿಕೆ ಬಾಗಿನ | ಹೊಸದುರ್ಗದಿಂದ 100 ಬಸ್‌ಗಳ ವ್ಯವಸ್ಥೆ | ಶಾಸಕ ಬಿ.ಜಿ. ಗೋವಿಂದಪ್ಪ
ಹೊಸದುರ್ಗ

ಸೆ. 24ರಂದು ಭದ್ರಾ ನಾಲೆಗೆ ಸಿಎಂ ಡಿಕೆ ಬಾಗಿನ | ಹೊಸದುರ್ಗದಿಂದ 100 ಬಸ್‌ಗಳ ವ್ಯವಸ್ಥೆ | ಶಾಸಕ ಬಿ.ಜಿ. ಗೋವಿಂದಪ್ಪ

Share
cm dk shivakumar ಸೆ. 24ರಂದು ಭದ್ರಾ ನಾಲೆಗೆ ಸಿಎಂ ಡಿಕೆ ಬಾಗಿನ hosadurga ml bg govindappa
Share

ಹೊಸದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 24ರಂದು ಜರುಗಲಿರುವ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಹೊಸದುರ್ಗ ತಾಲೂಕಿನಿಂದ ತೆರಳಲು 100 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಸಚಿವರು ಚಿತ್ರದುರ್ಗ ಕಾಲುವೆಗೆ ನೀರು ಹರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಉಭಯ ಜಿಲ್ಲೆಗಳ ನಾಯಕರನ್ನು ಮನವೊಲಿಸಿ ಜಿಲ್ಲೆಗೆ ನೀರು ಹರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದೊಯ್ದು ಅಭಿನಂದನೆ ಸಲ್ಲಿಸಬೇಕು ಎಂದು ಕರೆ ನೀಡಿದರು.

ಇನ್ನೆರಡು ತಿಂಗಳಲ್ಲಿ ತುಂಗಾ ನೀರು ಭದ್ರೆಗೆ

ತುಂಗಾ ನದಿಯಿಂದ ಭದ್ರಾ ನದಿಗೆ ನೀರು ಲಿಫ್ಟ್ ಮಾಡುವ ಕಾಮಗಾರಿ ಸಂಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕವೂ ಸಿಕ್ಕಿದೆ. ಮುಂದಿನ ಎರಡು ತಿಂಗಳಲ್ಲಿ ತುಂಗಾ ನೀರು ಭದ್ರೆಗೆ ಹರಿಯಲಿದೆ. ಸದ್ಯ ಚಿತ್ರದುರ್ಗ ಶಾಖಾ ಕಾಲುವೆಗೆ 0.65 ಟಿಎಂಸಿ ನೀರು ಹರಿದಿದ್ದು, ಮುಂದಿನ ಒಂದೂವರೆ ತಿಂಗಳು ನಿರಂತರವಾಗಿ ನೀರು ಹರಿಯಲಿದೆ. ರೈತರು ಶಾಂತರೀತಿಯಿಂದ ನೀರಿನ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತುಮಕೂರು ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳಿಸುವ ಹೊಣೆ ನನ್ನ ಮೇಲಿದೆ. ಪ್ರಸ್ತುತ ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದ್ದು, ಕೆರೆಗಳಿಗೆ ನೀರು ಬಂದಿಲ್ಲವೆಂದು ರೈತರು ಆತುರಪಡಬಾರದು. ಯಾರೂ ಜಾಕ್‌ವೆಲ್ ಅಥವಾ ನಾಲೆ ಒಡೆಯುವಂತಹ ಕಾನೂನುಬಾಹಿರ ಕೃತ್ಯಗಳಿಗೆ ಮುಂದಾಗಬಾರದು ಎಂದು ಮನವಿ ಮಾಡಿದರು.

ಸಭೆಯಲ್ಲಿ ಮುಖಂಡರಾದ ಓ. ಶಂಕರ್, ಟಿಪಿಸಿಎಎಂಎಸ್ ಅಧ್ಯಕ್ಷ ಕಾರೆಹಳ್ಳಿ ಬಸವರಾಜ್, ಕೆಪಿಸಿಸಿ ಸದಸ್ಯರಾದ ಎಂ.ಪಿ. ಶಂಕರ್, ಅಲ್ತಾಫ್ ಪಾಷ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ್, ಲೋಕೇಶ್, ಮಹಿಳಾ ಘಟಕದ ಅಧ್ಯಕ್ಷೆ ದೀಪಿಕಾ, ನಗರ ಘಟಕದ ಅಧ್ಯಕ್ಷ ಅಣ್ಣೋ ಶಿವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಬರ ಪರಿಹಾರ, ರಾಗಿ ಹಣ ಬಿಡುಗಡೆಗೆ ಆಗ್ರಹ: ಹೊಸದುರ್ಗದಲ್ಲಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆ

ಹೊಸದುರ್ಗ: ತಾಲ್ಲೂಕಿನಲ್ಲಿ ಆವರಿಸಿರುವ ಭೀಕರ ಬರಗಾಲಕ್ಕೆ ತಕ್ಷಣವೇ ಪರಿಹಾರ ಕಲ್ಪಿಸಬೇಕು ಹಾಗೂ ಬೆಂಬಲ ಬೆಲೆಯಡಿ ಖರೀದಿಸಿದ...

ರಂಗದ ಮೇಲೆ ಬರದ ಬದುಕಿನ ಮಾತು!: 6 ದಿನ, 6 ನಾಟಕ; ಸಾಣೇಹಳ್ಳಿ ರಂಗೋತ್ಸವಕ್ಕೆ ಸಜ್ಜು

ಹೊಸದುರ್ಗ: ರಂಗಭೂಮಿ, ವಿಚಾರ, ವಚನ ಸಂಗೀತ, ನೃತ್ಯ ಹಾಗೂ ಸಾಮಾಜಿಕ ಜಾಗೃತಿಯ ಸಂಗಮಕ್ಕೆ ಸಾಣೇಹಳ್ಳಿ ಮತ್ತೊಮ್ಮೆ...

ಹೊಸದುರ್ಗ ಮೂಲದ ದಕ್ಷ ಅಧಿಕಾರಿ ಟಿ. ಯೋಗೇಶ್‌ಗೆ ಪ್ರತಿಷ್ಠಿತ ‘ಸ್ಕೋಚ್ ಸ್ವರ್ಣ ಪ್ರಶಸ್ತಿ’

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನವರಾದ ಹಾಗೂ ದಕ್ಷ ಆಡಳಿತಕ್ಕೆ ಹೆಸರುವಾಸಿಯಾಗಿರುವ ಹಿರಿಯ ಅಧಿಕಾರಿ ಟಿ. ಯೋಗೇಶ್...

ಹೊಸದುರ್ಗ: ಭದ್ರಾ ಟ್ರಯಲ್ ರನ್ ವೇಳೆ ಕಾಲುವೆ ಒಡೆದ ಕಿಡಿಗೇಡಿಗಳು, ಅಪಾರ ನೀರು ಪೋಲು

ಹೊಸದುರ್ಗ: ದಶಕಗಳ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯ ನೀರು ಇನ್ನೇನು ನಮ್ಮ ಕೆರೆಗಳಿಗೆ ಹರಿದು ಬರಲಿದೆ...