ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC) ಕಚೇರಿಯ ಪ್ರಥಮ ದರ್ಜೆ ಸಹಾಯಕನೊಬ್ಬ (FDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಚಿತ್ರದುರ್ಗ ಎಸಿ ಕಚೇರಿಯ ಎಫ್ಡಿಎ ಬಸವರಾಜ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ. ಕಲ್ಲೋಡು ಗ್ರಾಮದ ಹನುಮಂತಪ್ಪ ಎಂಬುವವರ ಜಮೀನಿನ ಪಹಣಿ ತಿದ್ದುಪಡಿ ಕಾರ್ಯಕ್ಕಾಗಿ ಬಸವರಾಜ್ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಂದು ಎಸಿ ಕಚೇರಿಯಲ್ಲಿಯೇ ಖುದ್ದಾಗಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಎಫ್ಡಿಎ ಬಸವರಾಜ್ನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ಕವಲೆಪುರೆ ಹಾಗೂ ಡಿವೈಎಸ್ಪಿ ಕಲಾವತಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸದ್ಯ ಎಸಿ ಕಚೇರಿಯಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಲಂಚ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ಹಾಗೂ ಇತರ ದಾಖಲೆಗಳ ಪರಿಶೀಲನೆ ಮತ್ತು ತನಿಖೆಯನ್ನು ಮುಂದುವರಿಸಿದ್ದಾರೆ.
-
ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.
ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.
ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.