Home ರಾಜ್ಯ ಸಿಎಂ ಎದುರು ₹1,000 ಕೋಟಿ ಅನುದಾನದ ಬೇಡಿಕೆ: ಜನವರಿಯಲ್ಲಿ ಭೋವಿ ಸಮಾಜದ ಬೃಹತ್ ಸಮಾವೇಶಕ್ಕೆ ಸಿದ್ಧತೆ
ರಾಜ್ಯ

ಸಿಎಂ ಎದುರು ₹1,000 ಕೋಟಿ ಅನುದಾನದ ಬೇಡಿಕೆ: ಜನವರಿಯಲ್ಲಿ ಭೋವಿ ಸಮಾಜದ ಬೃಹತ್ ಸಮಾವೇಶಕ್ಕೆ ಸಿದ್ಧತೆ

Share
ಭೋವಿ ಸಮಾಜ, ಬೃಹತ್ ಸಮಾವೇಶ, ಶಿವರಾಜ್ ತಂಗಡಗಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಲಬುರಗಿ, ಬೆಂಗಳೂರು, ಮೀಸಲಾತಿ, Bhovi Samaja, Shivaraj Tangadagi, Bhovi Convention 2027
Share

ಬೆಂಗಳೂರು: ಭೋವಿ ಸಮಾಜದ ಸಂಘಟನೆ ಬಲಪಡಿಸಿ, ಸಮಾಜದ ಹಕ್ಕುಗಳು ಮತ್ತು ಬೇಡಿಕೆಗಳ ಈಡೇರಿಕೆಗೆ ರಾಜ್ಯಮಟ್ಟದಲ್ಲಿ ದೊಡ್ಡ ಹೋರಾಟ ರೂಪಿಸಬೇಕಿದೆ. ಈ ಹಿನ್ನೆಲೆಯಲ್ಲಿ 2027ರ ಜನವರಿಯ ಮೊದಲ ಅಥವಾ ಎರಡನೇ ವಾರದಲ್ಲಿ ಬೆಂಗಳೂರು ಅಥವಾ ಕಲಬುರಗಿಯಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಭೋವಿ ಸಮಾಜದ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಭಾನುವಾರ ಮಾತನಾಡಿದ ಅವರು, ಸಮಾವೇಶಕ್ಕೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ಸಮಾಜದ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದರು.

ಭೋವಿ ಸಮಾಜಕ್ಕೆ ಕನಿಷ್ಠ 8ರಿಂದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ, ಒಂದರಿಂದ ಎರಡು ವಿಧಾನ ಪರಿಷತ್ ಸ್ಥಾನಗಳು ಹಾಗೂ ಕನಿಷ್ಠ ಎರಡು ಲೋಕಸಭಾ ಸ್ಥಾನಗಳನ್ನು ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ ಎಂದು ಹೇಳಿದರು.

ಭೋವಿ ಸಮಾಜಕ್ಕೆ ಸಂಬಂಧಿಸಿದ ರೋಸ್ಟರ್ ವ್ಯವಸ್ಥೆಯನ್ನು ಸರಿಪಡಿಸುವ ಅಗತ್ಯವಿದೆ. ಈ ಕುರಿತು ಈಗಾಗಲೇ ಕಾರ್ಯಪತ್ರ ಸಿದ್ಧಪಡಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜಾತಿ ಪ್ರಮಾಣಪತ್ರ ಸೇರಿದಂತೆ ಸಮಾಜ ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಸನದಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಂಬಂಧಿಸಿದ ಮುಖಂಡರನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಪರಿಶೀಲಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

‘ಸಮಾಜಕ್ಕೆ ಅನ್ಯಾಯವಾದಾಗ ತಕ್ಷಣ ಸ್ಪಂದಿಸುವ ವ್ಯವಸ್ಥೆ ಇರಬೇಕು. ಎಲ್ಲ ವಿಚಾರಗಳಿಗೂ ಸ್ವಾಮೀಜಿ, ಶಿವರಾಜ್ ತಂಗಡಗಿ ಅಥವಾ ರಾಮಪ್ಪ ಅವರನ್ನೇ ಅವಲಂಬಿಸುವ ಮನೋಭಾವ ಇರಬಾರದು. ಸಮಾಜದ ಸಂಘಟನೆ ಬಲಗೊಂಡಾಗ ಹೊಸ ನಾಯಕತ್ವವೂ ಬೆಳೆಯುತ್ತದೆ’ ಎಂದು ಹೇಳಿದರು.

ತಮ್ಮನ್ನು ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಭೋವಿ ಸಮಾಜದ ಮುಖಂಡರು ಪತ್ರಿಕಾಗೋಷ್ಠಿ ಹಾಗೂ ಪ್ರತಿಭಟನೆಗಳನ್ನು ನಡೆಸಿದ್ದನ್ನು ಸ್ಮರಿಸಿದ ಅವರು, ಅದರ ಫಲವಾಗಿ ಸಚಿವ ಸ್ಥಾನ ದೊರೆತಿರುವುದಕ್ಕೆ ಸಮಾಜದ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

‘ಸಮಾಜದ ಎಲ್ಲ ಶಾಸಕರು ಹಾಗೂ ಮಾಜಿ ಶಾಸಕರನ್ನು ಪಕ್ಷಾತೀತವಾಗಿ ಒಂದೇ ವೇದಿಕೆಗೆ ಕರೆತಂದು ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಇಂದಿನ ಸಭೆಗೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಆಗಮಿಸಿರುವುದು ಸಮಾಜ ಎಚ್ಚರಗೊಂಡಿರುವುದಕ್ಕೆ ಸಾಕ್ಷಿ’ ಎಂದರು.

‘ಮಗು ಅಳದಿದ್ದರೆ ತಾಯಿ ಹಾಲು ಕೊಡುವುದಿಲ್ಲ ಎಂಬ ಮಾತಿದೆ. ಸರ್ಕಾರದ ಗಮನ ಸೆಳೆಯಬೇಕಾದರೆ ಸಮಾಜವೂ ಎಚ್ಚರಗೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು’ ಎಂದು ಹೇಳಿದರು.

ಹಿಂದಿನ ಸಮಾವೇಶದಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿತ್ತು. ಅವುಗಳಲ್ಲಿ ಎರಡು ಈಡೇರಿದ್ದು, ಉಳಿದ ಬೇಡಿಕೆಗಳ ಈಡೇರಿಕೆಗೂ ಸಂಘಟಿತ ಪ್ರಯತ್ನ ಮುಂದುವರಿಸಬೇಕು ಎಂದರು.

ಮೀಸಲಾತಿ ಹಾಗೂ ಆರ್ಥಿಕ ಪ್ರಾತಿನಿಧ್ಯದ ವಿಚಾರದಲ್ಲಿಯೂ ಸಂಘಟಿತವಾಗಿ ಧ್ವನಿ ಎತ್ತಬೇಕಿದೆ. ಮುಂದಿನ ಬಜೆಟ್‌ನಲ್ಲಿ ಭೋವಿ ಸಮಾಜಕ್ಕೆ ಶೇ 24.1ರಷ್ಟು ಪಾಲು ನೀಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಈ ಬೇಡಿಕೆ ಈಡೇರಿದರೆ ಸಮಾಜಕ್ಕೆ ಸುಮಾರು ₹1,000 ಕೋಟಿ ಮಟ್ಟದ ಅನುದಾನ ದೊರೆಯುವ ಸಾಧ್ಯತೆ ಇದೆ ಎಂದು ಶಿವರಾಜ್ ತಂಗಡಗಿ ಹೇಳಿದರು.

ಬೆಂಗಳೂರು ಅಥವಾ ಕಲಬುರಗಿಯಲ್ಲಿ ಸಮಾವೇಶ ನಡೆಸುವ ಕುರಿತು ಚರ್ಚೆ ನಡೆಯುತ್ತಿದ್ದು, ಕಲಬುರಗಿಯಲ್ಲಿ ಆಯೋಜಿಸಿದರೆ ಕಲ್ಯಾಣ ಕರ್ನಾಟಕ ಭಾಗದ ಭೋವಿ ಸಮಾಜದ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಸಾಧ್ಯವಾಗಲಿದೆ. ವಿಮಾನ ನಿಲ್ದಾಣದ ಸಂಪರ್ಕದ ದೃಷ್ಟಿಯಿಂದಲೂ ಮುಖಂಡರು ಹಾಗೂ ಗಣ್ಯರಿಗೆ ಅನುಕೂಲವಾಗಲಿದೆ ಎಂದರು.

ಮೂರು–ನಾಲ್ಕು ಜಿಲ್ಲೆಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸಮಾವೇಶಕ್ಕೆ ಕರೆತರುವ ಯೋಜನೆ ರೂಪಿಸಬೇಕು. ಪ್ರತಿ ಜಿಲ್ಲೆಯಿಂದ ಕನಿಷ್ಠ ಎರಡು ಬಸ್‌ಗಳಲ್ಲಿ ಜನರು ಭಾಗವಹಿಸುವಂತೆ ಸಂಘಟನೆ ಮಾಡಬೇಕು ಎಂದು ಸಲಹೆ ನೀಡಿದರು.

‘ಇಂದು ಬೀಜ ಬಿತ್ತಬೇಕು. ಬಿತ್ತನೆ ಮಾಡಿದ ನಂತರ ನೀರು, ಗೊಬ್ಬರ ಹಾಕಿದರೆ ಅದು ಬೆಳೆದು ಮರವಾಗಿ ಮುಂದಿನ ಪೀಳಿಗೆಗೆ ನೆರಳು ನೀಡುತ್ತದೆ. ಇಂದು ನಾವು ಕೈಗೊಳ್ಳುವ ಸಂಘಟನಾ ಪ್ರಯತ್ನಗಳು ಮುಂದಿನ ಪೀಳಿಗೆಗೆ ಅನುಕೂಲವಾಗಬೇಕು’ ಎಂದು ಹೇಳಿದರು.

ಜನವರಿಯ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸುವ ಕುರಿತು ಚಿಂತನೆ ಇದೆ. ಇದರೊಂದಿಗೆ ಸಮಾಜದ ಗುರುಗಳ ಜಯಂತಿ ಹಾಗೂ ಸಮಾವೇಶವನ್ನು ಸಂಯೋಜಿಸುವ ಬಗ್ಗೆಯೂ ಚರ್ಚಿಸಲಾಗುವುದು ಎಂದರು.

‘ಸಮಾಜದ ಸಂಘಟನೆಯನ್ನು ನಾನೊಬ್ಬನೇ ಮಾಡುತ್ತೇನೆ ಎನ್ನುವುದು ಮೂರ್ಖತನ. ಎಲ್ಲರನ್ನು ಒಗ್ಗೂಡಿಸಿ ಚರ್ಚಿಸಿ, ಒಮ್ಮತದ ನಿರ್ಧಾರ ಕೈಗೊಂಡಾಗ ಮಾತ್ರ ದೊಡ್ಡ ಸಂಘಟನೆ ನಿರ್ಮಾಣ ಸಾಧ್ಯ’ ಎಂದು ಶಿವರಾಜ್ ತಂಗಡಗಿ ಹೇಳಿದರು.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಭೋವಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ, ಮಾಜಿ ಅಧ್ಯಕ್ಷರಾದ ಸೀತಾರಾಮ್, ರವಿಕುಮಾರ್ ಹಾಗೂ ಒಸಿಸಿಐ ಕಾರ್ಯಾಧ್ಯಕ್ಷ ರವಿ ಮಾಕಳಿ ಉಪಸ್ಥಿತರಿದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಯತಿಗಳ ಜೀವನ ಸುಲಭವಾಗಿರುವುದಿಲ್ಲ, ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು: ಡಾ. ಶಿವಮೂರ್ತಿ ಮುರುಘಾ ಶರಣರು

ದಾವಣಗೆರೆ: "ಯತಿಗಳು ಹಾಗೂ ಸಾಧಕರ ಜೀವನ ಸುಲಭವಾಗಿರುವುದಿಲ್ಲ. ಜೀವನದ ಪ್ರತಿಯೊಂದು ಹಂತದಲ್ಲೂ ಸವಾಲುಗಳು ಹಾಗೂ ಸಮಸ್ಯೆಗಳು...

ತಿರುಮಲ: ಕರ್ನಾಟಕದ 19 ಹಿಂದುಳಿದ, ದಲಿತ ಮಠಾಧೀಶರಿಂದ ವೆಂಕಟೇಶ್ವರನ ದರ್ಶನ

ತಿರುಮಲ: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಎಸ್‌ಸಿ–ಎಸ್‌ಟಿ ಸಮುದಾಯಗಳನ್ನು ಪ್ರತಿನಿಧಿಸುವ 19 ಪೀಠಾಧೀಶರು ಮತ್ತು...

ಭೋವಿ ಸಮಾಜದ ಶಕ್ತಿ ಪ್ರದರ್ಶನಕ್ಕೆ ರಾಜ್ಯ ಮಟ್ಟದ ಭೋವಿ ಸಮ್ಮೇಳನ : ಇಮ್ಮಡಿ ಶ್ರೀ

ಬೆಂಗಳೂರು: ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಭೋವಿ ಸಮಾಜದ ಸಮ್ಮೇಳನಗಳು ಆ ಭಾಗದಲ್ಲಿ ನಡೆದಿಲ್ಲ. ಈ ಹಿನ್ನೆಲೆಯಲ್ಲಿ...

ಚಿರತೆ ಸೆರೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ದಾಳಿ

ದಾವಣಗೆರೆ: ಅಪಘಾತಕ್ಕೀಡಾಗಿ ರಾಷ್ಟ್ರೀಯ ಹೆದ್ದಾರಿ ಬದಿಗೆ ಬಂದಿದ್ದ ಚಿರತೆಯನ್ನು ಸೆರೆಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ...