Home ಚಿತ್ರದುರ್ಗ ಬಿ.ವೈ.ವಿಜಯೇಂದ್ರ ಇಂದು ಚಿತ್ರದುರ್ಗಕ್ಕೆ: ಮಾದಿಗ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿ
ಚಿತ್ರದುರ್ಗ

ಬಿ.ವೈ.ವಿಜಯೇಂದ್ರ ಇಂದು ಚಿತ್ರದುರ್ಗಕ್ಕೆ: ಮಾದಿಗ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿ

Share
by vijeyandra hd image
Share

ಚಿತ್ರದುರ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದು, ನಗರದ ವಾಲ್ಮೀಕಿ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಮಾದಿಗ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಜಿ.ಎಂ.ಸಿದ್ದೇಶ್ವರ, ಎ.ನಾರಾಯಣಸ್ವಾಮಿ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹಾಗೂ ಸಾಮರಸ್ಯ ಸಂಚಾಲಕ ವಾದಿರಾಜ್ ಭಾಗವಹಿಸಲಿದ್ದಾರೆ.

ಬಿಜೆಪಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ನಗರಮಂಡಲದ ವತಿಯಿಂದ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಗರಮಂಡಲದ ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿದ್ದಾರೆ.

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...