Home ಚಿತ್ರದುರ್ಗ ಚಿತ್ರದುರ್ಗ: ಅ. 3ರಂದು ಹಿಂದೂ ಮಹಾ ಗಣಪತಿ ವಿಸರ್ಜನೆ; ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
ಚಿತ್ರದುರ್ಗ

ಚಿತ್ರದುರ್ಗ: ಅ. 3ರಂದು ಹಿಂದೂ ಮಹಾ ಗಣಪತಿ ವಿಸರ್ಜನೆ; ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Share
Share

ಚಿತ್ರದುರ್ಗ (chitradurga.com): ನಗರದಲ್ಲಿ ದಿನಾಂಕ 03.10.2026 ರಂದು ನಡೆಯಲಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನಗಳ ಸುಗಮ ಸಂಚಾರಕ್ಕಾಗಿ ಜಿಲ್ಲಾಧಿಕಾರಿಗಳು ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 3ರ ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 12:00 ಗಂಟೆಯವರೆಗೆ ಈ ನಿಯಮಗಳು ಜಾರಿಯಲ್ಲಿರಲಿವೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

ಎಲ್ಲಿ ಸಂಚಾರ ನಿಷೇಧ? ಮೆರವಣಿಗೆ ಸಾಗುವ ಹಿನ್ನೆಲೆಯಲ್ಲಿ ನಗರದ ಚಳ್ಳಕೆರೆ ಗೇಟ್‌ನಿಂದ ಮಹಾತ್ಮ ಗಾಂಧಿ ವೃತ್ತ, ಹಾಗೂ ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬದಲಿ ಮಾರ್ಗಗಳೇನು? ಬೆಂಗಳೂರು, ಚಳ್ಳಕೆರೆ, ಹೊಸಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಭೀಮಸಮುದ್ರ ಕಡೆಯಿಂದ ಬರುವ ಎಲ್ಲಾ ಮಾದರಿಯ ಲಘು ಮತ್ತು ಭಾರಿ ವಾಹನಗಳು, ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ.

ಈ ವಾಹನಗಳು ರಾಷ್ಟ್ರೀಯ ಹೆದ್ದಾರಿ-48 (NH-48) ರಸ್ತೆಯ ಮುಖಾಂತರ ಬಂದು, ನಗರದ ಮೆದಹಳ್ಳಿ ರಸ್ತೆ ಎಪಿಎಂಸಿ ಮಾರ್ಕೆಟ್ ಮತ್ತು ಜೆಎಂಐಟಿ ವೃತ್ತದ ಮುಖಾಂತರ ನಗರಕ್ಕೆ ಪ್ರವೇಶಿಸಬೇಕು. ಕಾರ್ಯ ಮುಗಿಸಿದ ಬಳಿಕ ವಾಹನಗಳು ಅದೇ ಮಾರ್ಗದಲ್ಲಿ ವಾಪಸ್ ಹೋಗುವಂತೆ ಸೂಚಿಸಲಾಗಿದೆ.

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...