ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಬ್ರಹ್ಮಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸದಾಶಿವಪ್ಪ (65) ಎಂದು ಗುರುತಿಸಲಾಗಿದೆ. ಬ್ರಹ್ಮಪುರ ಗ್ರಾಮದ ತಮ್ಮ ಜಮೀನಿನ ಗುಡಿಸಿಲಲ್ಲಿ ಸದಾಶಿವಪ್ಪ ಅವರ ಮೃತದೇಹ ಪತ್ತೆಯಾಗಿದೆ. ಮೃತರ ಕಿವಿಯಲ್ಲಿ ರಕ್ತಸ್ರಾವವಾಗಿದ್ದು, ಮೈಮೇಲೆ ರಕ್ತದ ಕಲೆಗಳು ಕಂಡುಬಂದಿವೆ.
ಘಟನೆ ಕುರಿತು ಮೃತ ಸದಾಶಿವಪ್ಪ ಅವರ ಪುತ್ರಿ ಮೇಘಾ ಅವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.