Home ಚಿತ್ರದುರ್ಗ ರಸ್ತೆ ದಾಟುವಾಗ ದುರಂತ: ತಮಟಕಲ್ಲು ಬಳಿ ಅಪರಿಚಿತ ವಾಹನ ಹರಿದು ಚಿರತೆ ಮರಿ ಬಲಿ
ಚಿತ್ರದುರ್ಗ

ರಸ್ತೆ ದಾಟುವಾಗ ದುರಂತ: ತಮಟಕಲ್ಲು ಬಳಿ ಅಪರಿಚಿತ ವಾಹನ ಹರಿದು ಚಿರತೆ ಮರಿ ಬಲಿ

Share
ಚಿತ್ರದುರ್ಗದ ತಮಟಕಲ್ಲು ಬಳಿ NH 48 ರಸ್ತೆ ದಾಟುತ್ತಿದ್ದ ಚಿರತೆ ಮರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದೆ. ಚಾಲಕ ಪರಾರಿಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ಚಿತ್ರದುರ್ಗದ ತಾಜಾ ಸುದ್ದಿಗಳಿಗಾಗಿ ಓದಿ.
Share

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ತಮಟಕಲ್ಲು ಗ್ರಾಮದ ಸಮೀಪ ನಿನ್ನೆ ರಾತ್ರಿ ವಾಹನ ಡಿಕ್ಕಿಯಾಗಿ ಚಿರತೆ ಮರಿಯೊಂದು ಮೃತಪಟ್ಟಿದೆ.

ಚಿತ್ರದುರ್ಗ ತಾಲೂಕಿನ ತಮಟಕಲ್ಲು ಬಳಿ ಹೆದ್ದಾರಿ ದಾಟಲು ಯತ್ನಿಸುತ್ತಿದ್ದ ಚಿರತೆ ಮರಿಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮರಿ ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಚಿರತೆ ಮರಿಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಭಾಗದಲ್ಲಿ ಆಗಾಗ್ಗೆ ಕಾಡು ಪ್ರಾಣಿಗಳು ಹೆದ್ದಾರಿ ದಾಟುವುದು ಸಾಮಾನ್ಯವಾಗಿದ್ದು, ವಾಹನ ಸವಾರರು ನಿಧಾನವಾಗಿ ಚಲಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಪ್ಕರಣ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...