Home ಚಿತ್ರದುರ್ಗ ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ
ಚಿತ್ರದುರ್ಗ

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

Share
ಚಿತ್ರದುರ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೀಸಲಾತಿ ರದ್ದು ಹಾಗೂ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿ. ಶ್ರೀರಾಮುಲು.
Share

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಂಗಳವಾರ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಿಸಿತ್ತು. ಆದರೆ ಈ ಸರ್ಕಾರ ಕೋರ್ಟ್‌ನಲ್ಲಿ ಸರಿಯಾಗಿ ವಾದ ಮಾಡಲಿಲ್ಲ. ಏನು ದಾಡಿ ಆಗಿದೆ ಈ ಸರ್ಕಾರಕ್ಕೆ? ಎಂದು ಪ್ರಶ್ನಿಸಿದರು.

ದೆಹಲಿ ಪ್ರತಿಭಟನೆ ವೇಳೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಳ್ಳಾಡಿದ ವಿಚಾರದ ಬಗ್ಗೆ ಮಾತನಾಡಿ, ಸಿಎಂ ವಯಸ್ಸಿಗೆ ಗೌರವ ಕೊಡಬೇಕಿತ್ತು. ಅಂಗರಕ್ಷಕರು ಅವರನ್ನು ಎಳೆದು ಹಿಂದಕ್ಕೆ ಹಾಕಿದರು. ಇದು ಡಿಕೆಶಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅವಮಾನ ಎಂದು ಹೇಳಿದರು.

ಸಿದ್ದರಾಮಯ್ಯ ಅವರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇಂದು ಅದೇ ಸಿದ್ದರಾಮಯ್ಯ ಕೋರ್ಟಿಗೆ ಹೋಗಿ ಸ್ಟೇ ತರುವ ಪರಿಸ್ಥಿತಿ ಬಂದಿದೆ. ಇದೆಲ್ಲ ಸ್ಟಿಂಗ್ ಆಪರೇಷನ್ ನಾಟಕ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಕಾಂಗ್ರೆಸ್ ಕಚೇರಿ ಸಿಡಿ ಫ್ಯಾಕ್ಟರಿಯಾಗಿದೆ. ದೊಡ್ಡ ಕುರ್ಚಿ ಸಿಗಬೇಕು ಎಂದು ಸ್ಟಿಂಗ್ ಮಾಡುತ್ತಿದ್ದೀರಿ. ಇದರ ಪ್ರೊಡ್ಯೂಸರ್ ಯಾರು, ಡೈರೆಕ್ಟರ್ ಯಾರು ಎಂದು ಡಿಕೆಶಿ ಅವರೇ ಹೇಳಬೇಕು.
ಸ್ಟಿಂಗ್ ಮಾಡಿ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಿದರೆ ನಿಮ್ಮ ಹೊಟ್ಟೆ ತುಂಬುವುದಿಲ್ಲ. ಡಿಕೆಶಿ ಒಳ್ಳೆಯ ಸಿಎಂ ಅಲ್ಲ, ವ್ಯಾಪಾರಸ್ಥ ಸಿಎಂ ಎಂದು ಶ್ರೀರಾಮುಲು ವಾಗ್ದಾಳಿ ನಡೆಸಿದರು.

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...

“ಮತ ಕಸಿದುಕೊಳ್ಳುವುದು ಕೊಲೆ ಮಾಡಿದಂತೆ”: ಚಿತ್ರದುರ್ಗದಲ್ಲಿ ಚುನಾವಣಾ ಆಯೋಗ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

 ಚಿತ್ರದುರ್ಗ: ದೇಶದಲ್ಲಿ ಅಕ್ರಮ ದಾರಿ ಮೂಲಕ ಗದ್ದುಗೆ ಏರಿದ ಬಿಜೆಪಿ, ಈಗ ಮತಗಳ್ಳತನದೊಂದಿಗೆ ಅಧಿಕಾರ ಉಳಿಸಿಕೊಳ್ಳಲು...