Home ಚಿತ್ರದುರ್ಗ ಭದ್ರೆಗೆ ಬೇಕು ರಾಷ್ಟ್ರೀಯ ಯೋಜನೆ ಮನ್ನಣೆ: ಚಿತ್ರದುರ್ಗದಲ್ಲಿ ಸೆ.10ರಂದು ನೀರು ಹರಿಯುವ ಸಂಭ್ರಮ
ಚಿತ್ರದುರ್ಗ

ಭದ್ರೆಗೆ ಬೇಕು ರಾಷ್ಟ್ರೀಯ ಯೋಜನೆ ಮನ್ನಣೆ: ಚಿತ್ರದುರ್ಗದಲ್ಲಿ ಸೆ.10ರಂದು ನೀರು ಹರಿಯುವ ಸಂಭ್ರಮ

Share
Share

ಚಿತ್ರದುರ್ಗ: ಭದ್ರಾ ನೀರು ಪ್ರಾಯೋಗಿಕ ಪರೀಕ್ಷೆ ಮೂಲಕ ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾಗಿದ್ದು, ಈ ಕ್ಷಣವನ್ನು ಸಂಭ್ರಮಿಸಲು ಐಮಂಗಲ ಸಮೀಪದ ಭರಂಪುರದ ಬಳಿ ಸೆ.10ರಂದು ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ತಿಳಿಸಿದೆ.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಮುಖಂಡರು, ರೈತರು, ಕಾರ್ಮಿಕ ಸಂಘಟನೆ ಪದಾಧಿಕಾರಿಗಳು, ವಿವಿ ಸಾಗರದ ಜಲಾಶಯದ ಫೋಟೋ ಸ್ವೀಕರಿಸಿದ ಬಳಿಕ ಮಾತನಾಡಿದರು.

ಚಿಂತಕ ಜೆ.ಯಾದವರೆಡ್ಡಿ ಮಾತನಾಡಿ, “ಭದ್ರಾ ಯೋಜನೆ ಸಾಧ್ಯವೇ ಇಲ್ಲವೆಂಬ ಸ್ಥಿತಿಯಲ್ಲಿ ನೀರು ಹರಿದುಬರುತ್ತಿರುವುದು ನಮ್ಮಲ್ಲಿ ಸಂಭ್ರಮವನ್ನುಂಟು ಮಾಡಿದೆ. ಸಂಭ್ರಮೋತ್ಸವದ ಜೊತೆಗೆ ನಾವೆಲ್ಲರೂ ಮತ್ತೊಂದು ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ರಾಷ್ಟ್ರೀಯ ಯೋಜನೆ ಘೋಷಣೆ, 6,200 ಕೋಟಿ ರೂ. ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ತರಬೇಕಿದೆ. ಜೊತೆಗೆ ಜಿಲ್ಲೆಯ ಯಾವುದೇ ಕೆರೆ-ಕಟ್ಟೆಗಳು ಯೋಜನೆ ವ್ಯಾಪ್ತಿಯಿಂದ ಕೈಬಿಟ್ಟು ಹೋಗದಂತೆ ರಾಜ್ಯ ಸರ್ಕಾರ ಮುಂದಾಗಬೇಕಿದೆ” ಎಂದು ತಿಳಿಸಿದರು. ಚಳವಳಿ ಹಾದಿಯಲ್ಲಿ ನಿಸ್ವಾರ್ಥವಾಗಿ ಹೆಜ್ಜೆ ಹಾಕಿದ ಪಿ.ಕೋದಂಡರಾಮಯ್ಯ, ಎಂ.ಜಯಣ್ಣ, ಮುರುಘಾ ರಾಜೇಂದ್ರ ಒಡೆಯರ್, ಎಚ್.ಹನುಮಂತಪ್ಪ, ಸೋಮುಗುದ್ದು ರಂಗಸ್ವಾಮಿ, ಬಂಜಗೆರೆ ಜಯಪ್ರಕಾಶ್ ಹೀಗೆ ಸಾವಿರಾರು ಮಂದಿಯ ಸ್ಮರಣೆ ಅಗತ್ಯ ಎಂದರು.

ರೈತಸಂಘ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ ಮಾತನಾಡಿ, “ನೀರು ಬರುತ್ತಿರುವ ದೃಶ್ಯ ಕಣ್ತುಂಬಿಕೊಳ್ಳುವ ಭಾಗ್ಯ ದೊರೆಯುತ್ತಿರುವುದು ಸಂತಸ ತಂದಿದೆ. ಭದ್ರೆಯನ್ನು ಸ್ವಾಗತಿಸುವ ಜೊತೆಗೆ ನೀರಾವರಿ ವಿಷಯದಲ್ಲಿ ಸರ್ಕಾರದ ತಾರತಮ್ಯ ನೀತಿ ಖಂಡಿಸಬೇಕಿದೆ. ಎತ್ತರದ ಪ್ರದೇಶದ ಜಮೀನುಗಳಿಗೂ ಡ್ರಿಪ್ ಮೂಲಕ ನೀರಾವರಿ ಸೌಲಭ್ಯ ಕೊಡಬಹುದು. ಸಮಗ್ರ ನೀರಾವರಿ ಯೋಜನೆಗೆ ಆದ್ಯತೆ ನೀಡಬೇಕು” ಎಂದು ಆಗ್ರಹಿಸಿದರು.

ಕಾರ್ಮಿಕ ಮುಖಂಡ ಜಿ.ಸಿ.ಸುರೇಶಬಾಬು ಮಾತನಾಡಿ, “ಯಾವುದೇ ಸಣ್ಣ ಕೆರೆಯೂ ಯೋಜನೆಯಿಂದ ಕೈಬಿಟ್ಟು ಹೋಗಬಾರದು. ಜೊತೆಗೆ ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಎಥೆನಾಲ್ ಬಳಕೆ ಹೆಚ್ಚಾಗಲಿದ್ದು, ಬಂಗಾರದ ನಾಡು ಆಗಲಿದೆ. ಆದ್ದರಿಂದ ಯಾರೊಬ್ಬರೂ ಭೂಮಿ ಮಾರಾಟ ಮಾಡಬಾರದು” ಎಂದು ತಿಳಿಸಿದರು.

ಡಿ.ಸಿ.ನಾಗರಾಜ್, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ದಸಂಸ ರಾಜ್ಯ ನಾಯಕ ಡಿ.ದುರುಗೇಶಪ್ಪ ಮಾತನಾಡಿ, ಹೊಳಲ್ಕೆರೆ-ಮೊಳಕಾಲ್ಮೂರು ತಾಲ್ಲೂಕುಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ಕೆಲಸ ಆಗಬೇಕೆಂದು ಒತ್ತಾಯಿಸಿದರು. ಸಂಚಾಲಕ ಜೋಗಿಮಟ್ಟಿ ಈ.ಮಹೇಶಬಾಬು, ಮುಖಂಡರಾದ ರ‍್ಲಹಳ್ಳಿ ರವಿಕುಮಾರ್, ಪುರುಷೋತ್ತಮ್ ತೋರಣಗಟ್ಟೆ, ರಾಜು ಕೆಳಗೋಟೆ, ಕುಂಚಿಗನಾಳ್ ಮಹಾಲಿಂಗಪ್ಪ, ಟಿ.ಮಂಜಣ್ಣ, ಪಿ.ಆರ್.ತಿಪ್ಪೇಸ್ವಾಮಿ, ಕೆ.ರುದ್ರಮುನಿ, ಕಣಿವೆಮಾರಮ್ಮ ತಿಪ್ಪೇಸ್ವಾಮಿ, ಮಾಲತೇಶ್ ಅರಸ್, ಲಕ್ಷ್ಮೀಕಾಂತ್, ಬಸವರೆಡ್ಡಿ ಇತರರಿದ್ದರು.

ಭೂಮಿ ಮಾರಾಟ ಮಾಡದಿರಿ

ಜಿಲ್ಲೆಯ ರೈತರು ನೀರಿನ ಸಂಕಷ್ಟಕ್ಕೆ ಸಿಲುಕಿ ಸೋಲಾರ್ ಇತರೆ ಚಟುವಟಿಕೆಗಳಿಗೆ ಭೂಮಿ ಮಾರಾಟ ಮಾಡಲು ಮುಂದಾಗಬಾರದೆಂದು ಹೋರಾಟ ಸಮಿತಿಯ ಮುಖಂಡ ಬೇಡರರೆಡ್ಡಿಹಳ್ಳಿ ಬಸವರೆಡ್ಡಿ ತಿಳಿಸಿದರು. ಈಗಾಗಲೇ ಭದ್ರಾ ನೀರು ಜಿಲ್ಲೆಗೆ ಪ್ರವೇಶಿಸಿದ್ದು, ಅನೇಕ ಹಳ್ಳಿಗಳಿಗೆ ನೀರು ಬರಲಿದೆ. ಬಳಿಕ ಕೃಷಿ ಚಟುವಟಿಕೆಗೆ ಜೀವ ಬರಲಿದೆ ಎಂದರು.

ಕಾಮಗಾರಿಗೆ ಬೇಕು ವೇಗ

“ವಾಸ್ತವವಾಗಿ ನಮಗೆ 53 ಟಿಎಂಸಿ ಅಡಿ ನೀರು ದೊರೆಯಬೇಕಾಗಿತ್ತು. ಅದರೆ, ಎ ಮತ್ತು ಬಿ ಸ್ಕೀಂ ಒಗ್ಗೂಡಿಸಿ 29.5 ನೀಡಿದ್ದು, ಚಿತ್ರದುರ್ಗ ಜಿಲ್ಲೆಗೆ 21.5 ಟಿಎಂಸಿ ಅಡಿ ನೀರು ನಿಗದಿ ಆಗಿದೆ. ಈಗ 3 ಟಿಎಂಸಿ ಅಡಿ ನೀರು ಪ್ರಾಯೋಗಿಕವಾಗಿ ಹರಿಸಲಾಗುತ್ತಿದೆ” ಎಂದು ಸಂಚಾಲಕ ಚಳ್ಳಕೆರೆ ಬಸವರಾಜ್ ಹೇಳಿದರು. ಪ್ರತಿವರ್ಷ ಪೂರ್ಣ ಪ್ರಮಾಣದ ನೀರು ಹರಿಸಲು ಕಾಮಗಾರಿ ವೇಗ ಪಡೆದುಕೊಳ್ಳಬೇಕು, ಹೇರಳವಾಗಿ ಅನುದಾನ ನೀಡಬೇಕು ಎಂದರು.

ಸೆ. 10ರಂದು ಸಂಭ್ರಮೋತ್ಸವ

ಭದ್ರಾ ನೀರು ಐಮಂಗಲ ಸಮೀಪದ ಭರಮಪುರ ಕೆರೆಗೆ ಸೆ.10 ಗುರುವಾರ ಬರಲಿದ್ದು, ಅಂದು ಹೋರಾಟ ಸಮಿತಿ ಮುಖಂಡರು, ರೈತರು, ಸ್ಥಳೀಯರು ಪಿ.ಕೋದಂಡರಾಮಯ್ಯ ಅಧ್ಯಕ್ಷತೆಯಲ್ಲಿ ಸಂಭ್ರಮೋತ್ಸವ ಹಮ್ಮಿಕೊಂಡಿದ್ದಾರೆ ಎಂದು ಸಂಚಾಲಕ ನರೇನಹಳ್ಳಿ ಅರುಣ್‌ಕುಮಾರ್ ತಿಳಿಸಿದರು.

“ಭದ್ರಾ ಯೋಜನೆ ಸಾಧ್ಯವೇ ಇಲ್ಲವೆಂಬ ಸ್ಥಿತಿಯಲ್ಲಿ ನೀರು ಹರಿದುಬರುತ್ತಿರುವುದು ನಮ್ಮಲ್ಲಿ ಸಂಭ್ರಮವನ್ನುಂಟು ಮಾಡಿದೆ. ಸಂಭ್ರಮೋತ್ಸವದ ಜೊತೆಗೆ ನಾವೆಲ್ಲರೂ ಮತ್ತೊಂದು ಹೋರಾಟಕ್ಕೆ ಸಜ್ಜಾಗಬೇಕಾಗಿದೆ.” – ಜೆ. ಯಾದವರೆಡ್ಡಿ

“ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಎಥೆನಾಲ್ ಬಳಕೆ ಹೆಚ್ಚಾಗಲಿದ್ದು, ಬಂಗಾರದ ನಾಡು ಆಗಲಿದೆ. ಆದ್ದರಿಂದ ಯಾರೊಬ್ಬರೂ ಭೂಮಿ ಮಾರಾಟ ಮಾಡಬಾರದು.” – ಜಿ.ಸಿ. ಸುರೇಶಬಾಬು

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...