Home ಹೊಸದುರ್ಗ ಹೊಸದುರ್ಗ: ಭದ್ರಾ ಟ್ರಯಲ್ ರನ್ ವೇಳೆ ಕಾಲುವೆ ಒಡೆದ ಕಿಡಿಗೇಡಿಗಳು, ಅಪಾರ ನೀರು ಪೋಲು
ಹೊಸದುರ್ಗ

ಹೊಸದುರ್ಗ: ಭದ್ರಾ ಟ್ರಯಲ್ ರನ್ ವೇಳೆ ಕಾಲುವೆ ಒಡೆದ ಕಿಡಿಗೇಡಿಗಳು, ಅಪಾರ ನೀರು ಪೋಲು

Share
Share

ಹೊಸದುರ್ಗ: ದಶಕಗಳ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯ ನೀರು ಇನ್ನೇನು ನಮ್ಮ ಕೆರೆಗಳಿಗೆ ಹರಿದು ಬರಲಿದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಹೊಸದುರ್ಗ ಭಾಗದ ರೈತರಿಗೆ ಕಿಡಿಗೇಡಿಗಳು ಬಿಗ್ ಶಾಕ್ ನೀಡಿದ್ದಾರೆ. ಭದ್ರಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ (ಟ್ರಯಲ್ ರನ್) ನೀರು ಹರಿಸುತ್ತಿದ್ದಾಗಲೇ ದುಷ್ಕರ್ಮಿಗಳು ಕಾಲುವೆ ಒಡೆದು ಹಾಕಿದ್ದು, ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗಿದೆ.

ಹೊಸದುರ್ಗ ತಾಲೂಕಿನ ಮಾಡದಕೆರೆ ಹೋಬಳಿ ವ್ಯಾಪ್ತಿಯ ಲಕ್ಕಿಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದೆ. ಸರ್ಕಾರದ ಸೂಚನೆ ಮೇರೆಗೆ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಭದ್ರಾ ನೀರನ್ನು ಟ್ರಯಲ್ ರನ್ ಮೂಲಕ ಹರಿಸಲಾಗುತ್ತಿತ್ತು. ಆದರೆ, ಲಕ್ಕಿಹಳ್ಳಿ ಅರಣ್ಯ ಪ್ರದೇಶದ ಸರ್ವೆ ನಂಬರ್ 161 (ಚೈನೇಜ್ 79 ಕಿ.ಮೀ) ಬಳಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕಾಲುವೆಯನ್ನು ಜಖಂಗೊಳಿಸಿದ್ದಾರೆ. ಇದರಿಂದಾಗಿ ನೀರು ಮುಂದಕ್ಕೆ ಹರಿಯದೆ ಅಲ್ಲೇ ಪೋಲಾಗಿದ್ದು, ಕಾಲುವೆಯ ಮೂಲಸೌಕರ್ಯಕ್ಕೂ ಭಾರಿ ಹಾನಿಯಾಗಿದೆ.

₹50 ಲಕ್ಷ ಮೌಲ್ಯದ ಕಾಮಗಾರಿ ನಾಶ!

ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೃತ್ಯದಂತೆ ಕಂಡುಬಂದಿದ್ದು, ಕಾಲುವೆ ಒಡೆದಿರುವುದರಿಂದ ಬರೋಬ್ಬರಿ 50 ಲಕ್ಷ ರೂಪಾಯಿ ಮೌಲ್ಯದ ಕಾಮಗಾರಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಪ್ರಾಥಮಿಕ ಅಂದಾಜು ಮಾಡಿದ್ದಾರೆ. ಕಾಲುವೆ ಜಖಂಗೊಂಡಿರುವುದರಿಂದ ಮುಂದಿನ ಹಂತದಲ್ಲಿ ನೀರು ಹರಿಸುವ ಪ್ರಕ್ರಿಯೆಗೆ ದೊಡ್ಡ ಅಡ್ಡಿಯುಂಟಾಗಿದೆ.

ಸ್ಥಳಕ್ಕೆ ಉನ್ನತ ಅಧಿಕಾರಿಗಳ ದೌಡು

ಕಾಲುವೆ ಒಡೆದು ನೀರು ಪೋಲಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಎಂಜಿನಿಯರ್, ಅಧೀಕ್ಷಕ ಎಂಜಿನಿಯರ್, ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹಾನಿಯ ಪ್ರಮಾಣ ಹಾಗೂ ನೀರು ಪೋಲಾಗಿರುವ ಬಗ್ಗೆ ಜಂಟಿ ಪರಿಶೀಲನೆ ನಡೆಸಿದ್ದಾರೆ. ಆದಷ್ಟು ಬೇಗ ಕಾಲುವೆಯನ್ನು ದುರಸ್ತಿಗೊಳಿಸಿ, ಮತ್ತೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಹೊಸದುರ್ಗ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಭದ್ರಾ ಮೇಲ್ದಂಡೆ ಯೋಜನೆಯ ಸಹಾಯಕ ಇಂಜಿನಿಯರ್ ಅವರು ಹೊಸದುರ್ಗ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಬರ ಪರಿಹಾರ, ರಾಗಿ ಹಣ ಬಿಡುಗಡೆಗೆ ಆಗ್ರಹ: ಹೊಸದುರ್ಗದಲ್ಲಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆ

ಹೊಸದುರ್ಗ: ತಾಲ್ಲೂಕಿನಲ್ಲಿ ಆವರಿಸಿರುವ ಭೀಕರ ಬರಗಾಲಕ್ಕೆ ತಕ್ಷಣವೇ ಪರಿಹಾರ ಕಲ್ಪಿಸಬೇಕು ಹಾಗೂ ಬೆಂಬಲ ಬೆಲೆಯಡಿ ಖರೀದಿಸಿದ...

ರಂಗದ ಮೇಲೆ ಬರದ ಬದುಕಿನ ಮಾತು!: 6 ದಿನ, 6 ನಾಟಕ; ಸಾಣೇಹಳ್ಳಿ ರಂಗೋತ್ಸವಕ್ಕೆ ಸಜ್ಜು

ಹೊಸದುರ್ಗ: ರಂಗಭೂಮಿ, ವಿಚಾರ, ವಚನ ಸಂಗೀತ, ನೃತ್ಯ ಹಾಗೂ ಸಾಮಾಜಿಕ ಜಾಗೃತಿಯ ಸಂಗಮಕ್ಕೆ ಸಾಣೇಹಳ್ಳಿ ಮತ್ತೊಮ್ಮೆ...

ಹೊಸದುರ್ಗ ಮೂಲದ ದಕ್ಷ ಅಧಿಕಾರಿ ಟಿ. ಯೋಗೇಶ್‌ಗೆ ಪ್ರತಿಷ್ಠಿತ ‘ಸ್ಕೋಚ್ ಸ್ವರ್ಣ ಪ್ರಶಸ್ತಿ’

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನವರಾದ ಹಾಗೂ ದಕ್ಷ ಆಡಳಿತಕ್ಕೆ ಹೆಸರುವಾಸಿಯಾಗಿರುವ ಹಿರಿಯ ಅಧಿಕಾರಿ ಟಿ. ಯೋಗೇಶ್...

ಸೆ. 24ರಂದು ಭದ್ರಾ ನಾಲೆಗೆ ಸಿಎಂ ಡಿಕೆ ಬಾಗಿನ | ಹೊಸದುರ್ಗದಿಂದ 100 ಬಸ್‌ಗಳ ವ್ಯವಸ್ಥೆ | ಶಾಸಕ ಬಿ.ಜಿ. ಗೋವಿಂದಪ್ಪ

ಹೊಸದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್...