Home ಕೃಷಿ ನಾಳೆ ತಾಯಿ ಭದ್ರೆಗೆ ಸ್ವಾಗತ ಸಮಾರಂಭ | ಗೋನೂರು ಬಳಿ ಕಾರ್ಯಕ್ರಮ | ಮಠಾಧೀಶರು, ರಾಜಕಾರಣಿಗಳು, ಸಂಘಟನೆಗಳ ಪ್ರಮುಖರು ಭಾಗಿ
ಕೃಷಿಚಿತ್ರದುರ್ಗ

ನಾಳೆ ತಾಯಿ ಭದ್ರೆಗೆ ಸ್ವಾಗತ ಸಮಾರಂಭ | ಗೋನೂರು ಬಳಿ ಕಾರ್ಯಕ್ರಮ | ಮಠಾಧೀಶರು, ರಾಜಕಾರಣಿಗಳು, ಸಂಘಟನೆಗಳ ಪ್ರಮುಖರು ಭಾಗಿ

Share
Share

ಚಿತ್ರದುರ್ಗ, ಸೆ.8: ಜಿಲ್ಲೆಯ ಜನರು, ಜನಪ್ರತಿನಿಧಿಗಳು, ಎಲ್ಲ ಪಕ್ಷಗಳ ಪ್ರಮುಖರು ನಡೆಸಿದ ಹೋರಾಟದ ಪರಿಣಾಮ ಭದ್ರಾ ನೀರು ಜಿಲ್ಲೆ ಪ್ರವೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಾಯಿ ಭದ್ರೆಯನ್ನು ಸ್ವಾಗತಿಸಲು ಸೆ.10ರ ಗುರುವಾರ ಬೆಳಗ್ಗೆ 10 ಗಂಟೆಗೆ ಗೋನೂರು ಬಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಚಾಲಕ ಮಂಡಳಿ ತಿಳಿಸಿದೆ.

ಹೋರಾಟ ಸಮಿತಿ ಅಧ್ಯಕ್ಷ ಪಿ. ಕೋದಂಡರಾಮಯ್ಯ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ನೀರಾವರಿ ಹೋರಾಟದಲ್ಲಿ ನಿಸ್ವಾರ್ಥವಾಗಿ ಪಾಲ್ಗೊಂಡಿದ್ದ ಜಿಲ್ಲೆಯ ಮಠಾಧೀಶರು, ರೈತ, ಕನ್ನಡ, ಕಾರ್ಮಿಕ, ಅಸಂಘಟಿತ, ಆಟೋ, ಟ್ಯಾಕ್ಸಿ, ಕಾರು, ವಿದ್ಯಾರ್ಥಿ ಸಂಘಟನೆ, ವಿವಿಧ ಪಕ್ಷಗಳ ಪದಾಧಿಕಾರಿಗಳು, ಮುಖಂಡರುಗಳು, ಜನಪ್ರತಿನಿಧಿಗಳು, ರಾಜಕಾರಣಿಗಳು ಪಾಲ್ಗೊಳ್ಳಲಿದ್ದಾರೆ.

ತಾಯಿ ಭದ್ರೆಯನ್ನು ಸ್ವಾಗತಿಸುವ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಿಂದ ಕೈಬಿಟ್ಟಿರುವ ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ವಿವಿಧ ತಾಲ್ಲೂಕುಗಳಲ್ಲಿನ ಹಳ್ಳಿಗಳ ಕೆರೆಗಳನ್ನು ಸೇರಿಸಬೇಕು ಹಾಗೂ ಯಾವುದೇ ಒಂದು ಕೆರೆ ಭದ್ರೆ ನೀರಿನಿಂದ ವಂಚಿತವಾಗದಂತೆ ಸಮಗ್ರ ನೀರಾವರಿ ಯೋಜನೆ ಕಲ್ಪಿಸಬೇಕೆಂಬ ಎರಡನೇ ಹಂತದ ಹೋರಾಟ ಆರಂಭಿಸಬೇಕಿದೆ.
ಒಂದೆಡೆ ತಾಯಿ ಭದ್ರೆಯನ್ನು ಸ್ವಾಗತಿಸುತ್ತಲೇ ಮತ್ತೊಂದೆಡೆ ಜಿಲ್ಲೆಯ ಎಲ್ಲ ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಸಮಗ್ರ ನೀರಾವರಿ ಯೋಜನೆ ಕಲ್ಪಿಸಬೇಕೆಂಬ ಕೂಗು ಮಾರ್ದನಿಸಬೇಕಿದೆ.

ಮುಖ್ಯವಾಗಿ ಭದ್ರಾ ಮೇಲ್ದಂಡೆ ಯೋಜನೆ ಹೋರಾಟ ಮುನ್ನಡೆಸಿ ನಮ್ಮನ್ನು ಅಗಲಿರುವ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸಂಚಾಲಕರು, ಹೋರಾಟಗಾರರು, ರೈತರು, ಕಾರ್ಮಿಕರು ಸೇರಿ ವಿವಿಧ ಸಂಘಟನೆ, ಪಕ್ಷಗಳ ಮುಂಚೂಣಿ ನಾಯಕರನ್ನು ಸ್ಮರಿಸಬೇಕಿದೆ. ಸಂಭ್ರಮ, ಸ್ಮರಣೆ, ಹೋರಾಟದ ಕಹಳೆ ಎಂಬ ಮೂರು ಸಮ್ಮಿಲನದ ಸಮಾರಂಭದಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಾಯಿ ಭದ್ರೆ ಹಾಗೂ ಹೋರಾಟಗಾರರಿಗೆ ಗೌರವ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗಾಗಿ
ಜೋಗಿಮಟ್ಟಿ ಈ.ಮಹೇಶಬಾಬು
ಸಂಚಾಲಕರು, ಜಿಲ್ಲಾ ನೀರಾವರಿ ಹೋರಾಟ ಸಮಿತಿ, ಚಿತ್ರದುರ್ಗ
ಮೊ.ನಂ: 9900882955

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...