Home ಚಿತ್ರದುರ್ಗ 7 ವರ್ಷಗಳಿಂದ ನಿಂತ ಭವನಕ್ಕೆ ವೀರೇಂದ್ರ ಪಪ್ಪಿ ಕಾಳಜಿ; ₹6 ಕೋಟಿ ನಿರೀಕ್ಷೆ
ಚಿತ್ರದುರ್ಗ

7 ವರ್ಷಗಳಿಂದ ನಿಂತ ಭವನಕ್ಕೆ ವೀರೇಂದ್ರ ಪಪ್ಪಿ ಕಾಳಜಿ; ₹6 ಕೋಟಿ ನಿರೀಕ್ಷೆ

Share
Share

ಚಿತ್ರದುರ್ಗ: ನಗರದ ಡಾ. ಬಾಬು ಜಗಜೀವನ್ ರಾಮ್ ಸಮುದಾಯ ಭವನದ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹6 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಲ್ಲಿಸಿದ್ದ ಮನವಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸ್ಪಂದಿಸಿದ್ದಾರೆ.

ಶಾಸಕರ ಮನವಿಯ ಹಿನ್ನೆಲೆಯಲ್ಲಿ ಭವನಕ್ಕೆ ಭೇಟಿ ನೀಡಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದ ಸಚಿವರು, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶೀಘ್ರವೇ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಗರದಲ್ಲಿ 2016–17ನೇ ಸಾಲಿನಲ್ಲಿ ₹9.50 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಡಾ. ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿ ಅನುದಾನದ ಕೊರತೆಯಿಂದ ಪೂರ್ಣಗೊಂಡಿಲ್ಲ. ಕಳೆದ 7–8 ವರ್ಷಗಳಿಂದ ಭವನ ಉದ್ಘಾಟನೆಯಾಗದೆ ಉಳಿದಿದೆ.
ಭವನದ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಶೀಘ್ರವಾಗಿ ಮುಕ್ತಗೊಳಿಸುವ ಉದ್ದೇಶದಿಂದ ಶಾಸಕ ವೀರೇಂದ್ರ ಪಪ್ಪಿ ಅವರು ಸಚಿವರಿಗೆ ಮನವಿ ಸಲ್ಲಿಸಿದ್ದರು.

ಭವನ ಪೂರ್ಣಗೊಂಡರೆ ಸಾರ್ವಜನಿಕರು ಹಾಗೂ ವಿವಿಧ ಸಂಘ–ಸಂಸ್ಥೆಗಳು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಭೆ–ಸಮಾರಂಭಗಳನ್ನು ಆಯೋಜಿಸಲು ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶಾಸಕರ ಮನವಿಯನ್ನು ಪರಿಗಣಿಸಿದ ಸಚಿವ ಮುನಿಯಪ್ಪ ಅವರು ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮಾಜಿ ಸಚಿವ ಎಚ್. ಆಂಜನೇಯ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಂಟೆಂಡೆಂಟ್ ಎಂಜಿನಿಯರ್ ವಿನಯ್ ಕುಮಾರ್, ಕಾರ್ಯನಿರ್ವಾಹಕ ಎಂಜಿನಿಯರ್ ಸದಾಶಿವಮೂರ್ತಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪರಮೇಶ್ವರಪ್ಪ, ಮುಖಂಡರಾದ ಮೈಲಾರಪ್ಪ, ನರಸಿಂಹ, ವಕೀಲರಾದ ರವಿಕುಮಾರ್, ಚೇತನ್ ಸೇರಿದಂತೆ ಅಧಿಕಾರಿಗಳು ಇದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಚಿತ್ರದುರ್ಗ: NH-13 ರಲ್ಲಿ ಭೀಕರ ರಸ್ತೆ ಅಪಘಾತ — ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು,...

ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲೇ ಅತಿ ಹೆಚ್ಚು ಮತದಾರರು; ಅ.23ರಂದು ಮತದಾನ, ಸಕಲ ಸಿದ್ಧತೆ ಪೂರ್ಣ

ಚಿತ್ರದುರ್ಗ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ-2026ಕ್ಕೆ ಇದೇ ತಿಂಗಳ ಅಕ್ಟೋಬರ್ 23 ರಂದು ಮತದಾನ...

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...