Home ಚಿತ್ರದುರ್ಗ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಬೃಹತ್ ಬೈಕ್ ರ‍್ಯಾಲಿ: ಕೇಸರಿಮಯವಾದ ಕೋಟೆನಾಡು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಬೃಹತ್ ಬೈಕ್ ರ‍್ಯಾಲಿ: ಕೇಸರಿಮಯವಾದ ಕೋಟೆನಾಡು!

Share
ಹಿಂದೂ ಮಹಾಗಣಪತಿ 2026 chitradurga
Share

ಚಿತ್ರದುರ್ಗ (ಅ. 01): ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ‘ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಗುರುವಾರ ನಗರದ ವಿವಿಧ ಬಡಾವಣೆಗಳಲ್ಲಿ ಬೃಹತ್ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು.

ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ವೃತ್ತದಲ್ಲಿ ಮುಂಜಾನೆ 10 ಗಂಟೆ ಸಮಯದಲ್ಲಿ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿಗೆ ಬಜರಂಗದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾದಾರ ಗುರು ಪೀಠದ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಮಾಜಿ ಶಾಸಕರುಗಳಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿಯ ಉಮೇಶ್ ಕಾರಜೋಳ, ಅನಿತ್ ಕುಮಾರ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಶಶಿಧರ್ ಬಸಮ್ಮ, ಬಿ.ಜಯ್ಯಪ್ಪ, ಹಿಂದೂ ಮಹಾ ಗಣಪತಿ ಸಮಿತಿಯ ಅಧ್ಯಕ್ಷರಾದ ಜಿ.ಆರ್.ಸುದೀರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬದರಿನಾಥ್, ಅಶೋಕ್ ಕುಮಾರ್, ಕಾರ್ತಿಕ್ ಸೇರಿದಂತೆ ಇತರ ಪ್ರಮುಖರು ಭಾಗವಹಿಸಿದ್ದರು.

ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಪ್ರಾರಂಭಗೊಂಡ ಬೈಕ್ ರ‍್ಯಾಲಿ ಸಂಗೊಳ್ಳಿ ರಾಯಣ್ಣ ವೃತ್ತ, ಬುರುಜನಹಟ್ಟಿ ಸರ್ಕಲ್, ಆನೆಬಾಗಿಲು, ಕೋಟೆ ರಸ್ತೆ, ಶ್ರೀ ಏಕನಾಥೇಶ್ವರಿ ಪಾದಗಟ್ಟೆ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ, ಜಟ್‌ಪಟ್ ನಗರ, ಸ್ಟೇಡಿಯಂ ರಸ್ತೆ, ಬಿ.ಡಿ. ರಸ್ತೆ, ಮದಕರಿ ವೃತ್ತ, ಗಾಂಧಿ ವೃತ್ತ, ಎನ್.ಹೆಚ್.-4 ಸರ್ವಿಸ್ ರಸ್ತೆ, ಜೆ.ಸಿ.ಆರ್. ರಸ್ತೆ, ವಾಸವಿ ವೃತ್ತ, ಡಿ.ಸಿ. ವೃತ್ತ, ಅಂಬೇಡ್ಕರ್ ವೃತ್ತದ ಮುಖಾಂತರ ಸಾಗಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಯಶಸ್ವಿಯಾಗಿ ಮುಕ್ತಾಯವಾಯಿತು. ಯುವಜನತೆ ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...