Home ಅಪರಾಧ ಚಿತ್ರದುರ್ಗ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಎಸಿ ಕಚೇರಿಯ ಎಫ್‌ಡಿಎ ಲೋಕಾಯುಕ್ತ ಬಲೆಗೆ
ಅಪರಾಧಚಿತ್ರದುರ್ಗ

ಚಿತ್ರದುರ್ಗ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಎಸಿ ಕಚೇರಿಯ ಎಫ್‌ಡಿಎ ಲೋಕಾಯುಕ್ತ ಬಲೆಗೆ

Share
ಚಿತ್ರದುರ್ಗ ಎಸಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ (Chitradurga AC office Lokayukta raid)
Share

ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC) ಕಚೇರಿಯ ಪ್ರಥಮ ದರ್ಜೆ ಸಹಾಯಕನೊಬ್ಬ (FDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಚಿತ್ರದುರ್ಗ ಎಸಿ ಕಚೇರಿಯ ಎಫ್‌ಡಿಎ ಬಸವರಾಜ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ. ಕಲ್ಲೋಡು ಗ್ರಾಮದ ಹನುಮಂತಪ್ಪ ಎಂಬುವವರ ಜಮೀನಿನ ಪಹಣಿ ತಿದ್ದುಪಡಿ ಕಾರ್ಯಕ್ಕಾಗಿ ಬಸವರಾಜ್ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.

ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಂದು ಎಸಿ ಕಚೇರಿಯಲ್ಲಿಯೇ ಖುದ್ದಾಗಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಎಫ್‌ಡಿಎ ಬಸವರಾಜ್‌ನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್‌ಪಿ ಕವಲೆಪುರೆ ಹಾಗೂ ಡಿವೈಎಸ್‌ಪಿ ಕಲಾವತಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸದ್ಯ ಎಸಿ ಕಚೇರಿಯಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಲಂಚ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ಹಾಗೂ ಇತರ ದಾಖಲೆಗಳ ಪರಿಶೀಲನೆ ಮತ್ತು ತನಿಖೆಯನ್ನು ಮುಂದುವರಿಸಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...