Home ಹೊಳಲ್ಕೆರೆ ಆರು ಶಿಕ್ಷಕರಿಗೆ ‘ವಿಜ್ಞಾನ ರತ್ನ’ ಪ್ರಶಸ್ತಿ: ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಘೋಷಣೆ
ಹೊಳಲ್ಕೆರೆ

ಆರು ಶಿಕ್ಷಕರಿಗೆ ‘ವಿಜ್ಞಾನ ರತ್ನ’ ಪ್ರಶಸ್ತಿ: ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಘೋಷಣೆ

Share
Share

ಚಿತ್ರದುರ್ಗ: ವಿಜ್ಞಾನ ಬೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಜಿಲ್ಲೆಯ ಆರು ವಿಜ್ಞಾನ ಶಿಕ್ಷಕರಿಗೆ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ವತಿಯಿಂದ 2026–27ನೇ ಸಾಲಿನ ‘ವಿಜ್ಞಾನ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.

ಪ್ರತಿವರ್ಷ ವಿಜ್ಞಾನ ಶಿಕ್ಷಕರ ಸಾಧನೆಯನ್ನು ಗುರುತಿಸಿ ಗೌರವಿಸುತ್ತಿರುವ ಫೌಂಡೇಶನ್, ಈ ಬಾರಿ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ಆರು ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಚಿತ್ರದುರ್ಗ ತಾಲ್ಲೂಕಿನ ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ಸಿ.ಜಿ. ಹಾಲೇಶ್, ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಟಿ.ಜೆ. ವೆಂಕಟೇಶ್, ಹೊಸದುರ್ಗ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಬಿ.ಕೆ. ಪ್ರಮೀಳಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಗ್ರಾಮಾಂತರ ಪ್ರೌಢಶಾಲೆಯ ಸೈಯದ್ ಸಾದಿಕ್ ಬಾಷಾ, ಮೊಳಕಾಲ್ಮೂರು ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್.ಕೆ. ವಿರೂಪಾಕ್ಷ ಹಾಗೂ ಚಳ್ಳಕೆರೆ ತಾಲ್ಲೂಕಿನ ದೇವರೆಡ್ಡಿಹಳ್ಳಿ ಗ್ರಾಮಾಂತರ ಪ್ರೌಢಶಾಲೆಯ ಶಿಕ್ಷಕಿ ಬಿ.ಎ. ಮಮತಾದೇವಿ ಕೂಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೆಪ್ಟೆಂಬರ್ 7ರಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಆರು ಶಿಕ್ಷಕರಿಗೆ ‘ವಿಜ್ಞಾನ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಹೊಳಲ್ಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಪರ ಸಭೆ: ಸಚಿವರು, ಮುಖಂಡರ ಭಾಗಿ

ಹೊಳಲ್ಕೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶಿ ಹುಲಿಕುಂಟೆ...

ಹೊಳಲ್ಕೆರೆ: ಜಮೀನಿನ ಗುಡಿಸಲಿನಲ್ಲಿ ವೃದ್ಧನ ಶವ ಪತ್ತೆ; ಕೊಲೆ ಶಂಕೆ

ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ...

ಹೊಳಲ್ಕೆರೆಯಲ್ಲಿ ಕೋಟಿ ಕೋಟಿ ಲೂಟಿ: ತನಿಖೆಗೆ ಎಚ್. ಆಂಜನೇಯ ಆಗ್ರಹ

ಚಿತ್ರದುರ್ಗ, ಸೆ.21: ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರವನ್ನು ಅಧಿಕಾರಿಗಳು ನಡೆಸಿದ್ದು, ಈ ಹಿನ್ನೆಲೆಯಲ್ಲಿ...

ಸಾವಯವ ಕೃಷಿ ಮತ್ತು ಸೋಲಾರ್ ಆಧಾರಿತ ಜೀವನೋಪಾಯ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ

ಚಿತ್ರದುರ್ಗ: ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ದಾವಣಗೆರೆ ಟೆಕ್ನೋಸರ್ವ್ ಸಂಸ್ಥೆ ಹಾಗೂ ಸೆಲ್ಕೋ ಸಂಸ್ಥೆ...