Home ಚಿತ್ರದುರ್ಗ ಚಿತ್ರದುರ್ಗ: 20 ಲಕ್ಷಕ್ಕೂ ಅಧಿಕ ಜಾತಿ ಪ್ರಮಾಣಪತ್ರ ವಿತರಿಸಿದ ಜಿಲ್ಲಾಡಳಿತಕ್ಕೆ ಸಿಎಂ ಪ್ರಧಾನ ಕಾರ್ಯದರ್ಶಿ ಅಭಿನಂದನೆ
ಚಿತ್ರದುರ್ಗ

ಚಿತ್ರದುರ್ಗ: 20 ಲಕ್ಷಕ್ಕೂ ಅಧಿಕ ಜಾತಿ ಪ್ರಮಾಣಪತ್ರ ವಿತರಿಸಿದ ಜಿಲ್ಲಾಡಳಿತಕ್ಕೆ ಸಿಎಂ ಪ್ರಧಾನ ಕಾರ್ಯದರ್ಶಿ ಅಭಿನಂದನೆ

Share
Share

ಚಿತ್ರದುರ್ಗ (ಆ. 22): ಜಿಲ್ಲೆಯಲ್ಲಿ ಮನೆ-ಮನೆಗೆ ತೆರಳಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಕಾರ್ಯದಲ್ಲಿ ಶೇ. 100ರಷ್ಟು ಸಾಧನೆ ಮಾಡಿರುವ ಜಿಲ್ಲಾಡಳಿತದ ಕ್ರಮಕ್ಕೆ ಸರ್ಕಾರದ ಮಟ್ಟದಲ್ಲಿ ತೀವ್ರ ಶ್ಲಾಘನೆ ವ್ಯಕ್ತವಾಗಿದೆ. ಬರೋಬ್ಬರಿ 20 ಲಕ್ಷಕ್ಕೂ ಅಧಿಕ ಪ್ರಮಾಣಪತ್ರಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವ ಜಿಲ್ಲಾಡಳಿತದ ಕಾರ್ಯವನ್ನು ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಇಲಾಖೆಯ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮುನೀಷ್ ಮೌದ್ಗಿಲ್ ಅವರು ಪ್ರಶಂಸಿಸಿದ್ದಾರೆ.

ಈ ಮಹತ್ವದ ಸಾಧನೆಗಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಮುನೀಷ್ ಮೌದ್ಗಿಲ್ ವಿಶೇಷ ಅಭಿನಂದನಾ ಪತ್ರ ಬರೆದಿದ್ದಾರೆ. “ಅಗತ್ಯ ದಾಖಲೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವುದು ನಿಜವಾದ ಅರ್ಥದಲ್ಲಿ ನಾಗರಿಕ ಕೇಂದ್ರಿತವಾದ ಮಹತ್ವದ ಸಾಧನೆಯಾಗಿದೆ. ಇದು ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಜಿಲ್ಲಾಡಳಿತದ ಬದ್ಧತೆ ಮತ್ತು ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಮಹತ್ವದ ಸಾಧನೆಗಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಮುನೀಷ್ ಮೌದ್ಗಿಲ್ ವಿಶೇಷ ಅಭಿನಂದನಾ ಪತ್ರ ಬರೆದಿದ್ದಾರೆ. “ಅಗತ್ಯ ದಾಖಲೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವುದು ನಿಜವಾದ ಅರ್ಥದಲ್ಲಿ ನಾಗರಿಕ ಕೇಂದ್ರಿತವಾದ ಮಹತ್ವದ ಸಾಧನೆಯಾಗಿದೆ. ಇದು ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಜಿಲ್ಲಾಡಳಿತದ ಬದ್ಧತೆ ಮತ್ತು ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯದ ಇತರ ಎಲ್ಲ ಯೋಜನೆಗಳು ಹಾಗೂ ಉಪಕ್ರಮಗಳ ಅನುಷ್ಠಾನದಲ್ಲಿಯೂ ಇದೇ ರೀತಿಯ ಉತ್ಸಾಹ ಮತ್ತು ಬದ್ಧತೆ ಮುಂದುವರಿಯಲಿ. ಆ ಮೂಲಕ ಜನಪರ ಆಡಳಿತಕ್ಕೆ ಮತ್ತಷ್ಟು ಬಲ ತುಂಬುವಂತಾಗಲಿ ಎಂದು ಮುನೀಷ್ ಮೌದ್ಗಿಲ್ ಅವರು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹಾಗೂ ಈ ಕಾರ್ಯದಲ್ಲಿ ತೊಡಗಿಸಿಕೊಂಡ ಸಂಪೂರ್ಣ ಕಂದಾಯ ಇಲಾಖೆಯ ತಂಡಕ್ಕೆ ಶುಭ ಹಾರೈಸಿದ್ದಾರೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Loading News...

More News

Related Articles

ಚಿತ್ರದುರ್ಗ: ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ಪ್ರಶಸ್ತಿ’ ಪ್ರದಾನ; ನಾಲ್ವರು ಗಣ್ಯರಿಗೆ ಗೌರವ

ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ...

ಚಿತ್ರದುರ್ಗ ನೀರಾವರಿ ಹೋರಾಟ: ‘ಮುಕ್ತವಿಚಾರ ವೇದಿಕೆ’ಯ ಭದ್ರಾ ಮೇಲ್ದಂಡೆ ಚಳವಳಿಯ ಇತಿಹಾಸ

ಬರಹ: ಗೌನಹಳ್ಳಿ ಗೋವಿಂದಪ್ಪ ಚಿತ್ರದುರ್ಗ: ಏಳುಸುತ್ತಿನಕೋಟೆಯ ಗತ್ತು ಇದೆ, ಕಲ್ಲಿನ ಗೋಡೆಗಳಲ್ಲಿ ಅಡಗಿರುವ ರಣ ಕಲಾವಿದರ...

ಚಿತ್ರದುರ್ಗದ ಮೂರು ತಾಲ್ಲೂಕುಗಳು ಶೀಘ್ರವೇ ಬರ ಪಟ್ಟಿಗೆ ಸೇರ್ಪಡೆ: ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ

ಚಿತ್ರದುರ್ಗ (Chitradurga Live News): ಜಿಲ್ಲೆಯ ಬಿಟ್ಟುಹೋಗಿರುವ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳು ಮುಂದಿನ...

ಕೋಟೆನಾಡಿಗೆ ಮತ್ತೊಂದು ಗರಿ: ಕುವೆಂಪು ಭಾಷಾ ಭಾರತಿ ಪ್ರಶಸ್ತಿಗೆ ಡಾ.ಬಂಜಗೆರೆ ಜಯಪ್ರಕಾಶ್ ಆಯ್ಕೆ

ಚಿತ್ರದುರ್ಗ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಚಿತ್ರದುರ್ಗದ ಹೆಮ್ಮೆಯ...