Home ರಾಜ್ಯ ಚಿರತೆ ಸೆರೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ದಾಳಿ
ರಾಜ್ಯ

ಚಿರತೆ ಸೆರೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ದಾಳಿ

Share
Share

ದಾವಣಗೆರೆ: ಅಪಘಾತಕ್ಕೀಡಾಗಿ ರಾಷ್ಟ್ರೀಯ ಹೆದ್ದಾರಿ ಬದಿಗೆ ಬಂದಿದ್ದ ಚಿರತೆಯನ್ನು ಸೆರೆಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಿಗ್ಗೆ ದಾವಣಗೆರೆ ತಾಲ್ಲೂಕಿನ ಆನಗೋಡು ಹೊರವಲಯದ ಕೊಕ್ಕನೂರು ಬಳಿ ನಡೆದಿದೆ.

ಸೋಮವಾರ ತಡರಾತ್ರಿ ಸುಮಾರು 11.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ ಬಳಿ ಚಿರತೆ ಕಾಣಿಸಿಕೊಂಡಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ಹೆದ್ದಾರಿ ಬದಿಗೆ ಬಂದಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಚಿರತೆಗೆ ಅರವಳಿಕೆ ಮದ್ದು ನೀಡಿದ್ದರು.

ಬಳಿಕ ಅದನ್ನು ಸುರಕ್ಷಿತವಾಗಿ ಸೆರೆಹಿಡಿದು ಸ್ಥಳಾಂತರಿಸಲು ಕಾರ್ಯಾಚರಣೆ ಆರಂಭಿಸಿದ್ದರು.

ಮಂಗಳವಾರ ಬೆಳಿಗ್ಗೆ ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅದು ಏಕಾಏಕಿ ಸಿಬ್ಬಂದಿ ಮೇಲೆ ಎರಗಿದೆ. ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಘಟನೆಯಿಂದ ಕಾರ್ಯಾಚರಣೆ ಸ್ಥಗಿತಗೊಳಿಸದೆ ಅರಣ್ಯ ಸಿಬ್ಬಂದಿ ಮತ್ತೆ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದರು.

ಚಿರತೆ ಸೆರೆ ಕಾರ್ಯಾಚರಣೆ ಸುದ್ದಿ ತಿಳಿದು ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಜಮಾಯಿಸಿದ್ದರು. ಜನರು ಚಿರತೆಯ ಬಳಿ ತೆರಳದಂತೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಯತಿಗಳ ಜೀವನ ಸುಲಭವಾಗಿರುವುದಿಲ್ಲ, ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು: ಡಾ. ಶಿವಮೂರ್ತಿ ಮುರುಘಾ ಶರಣರು

ದಾವಣಗೆರೆ: "ಯತಿಗಳು ಹಾಗೂ ಸಾಧಕರ ಜೀವನ ಸುಲಭವಾಗಿರುವುದಿಲ್ಲ. ಜೀವನದ ಪ್ರತಿಯೊಂದು ಹಂತದಲ್ಲೂ ಸವಾಲುಗಳು ಹಾಗೂ ಸಮಸ್ಯೆಗಳು...

ತಿರುಮಲ: ಕರ್ನಾಟಕದ 19 ಹಿಂದುಳಿದ, ದಲಿತ ಮಠಾಧೀಶರಿಂದ ವೆಂಕಟೇಶ್ವರನ ದರ್ಶನ

ತಿರುಮಲ: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಎಸ್‌ಸಿ–ಎಸ್‌ಟಿ ಸಮುದಾಯಗಳನ್ನು ಪ್ರತಿನಿಧಿಸುವ 19 ಪೀಠಾಧೀಶರು ಮತ್ತು...

ಭೋವಿ ಸಮಾಜದ ಶಕ್ತಿ ಪ್ರದರ್ಶನಕ್ಕೆ ರಾಜ್ಯ ಮಟ್ಟದ ಭೋವಿ ಸಮ್ಮೇಳನ : ಇಮ್ಮಡಿ ಶ್ರೀ

ಬೆಂಗಳೂರು: ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಭೋವಿ ಸಮಾಜದ ಸಮ್ಮೇಳನಗಳು ಆ ಭಾಗದಲ್ಲಿ ನಡೆದಿಲ್ಲ. ಈ ಹಿನ್ನೆಲೆಯಲ್ಲಿ...

ಸಿಎಂ ಎದುರು ₹1,000 ಕೋಟಿ ಅನುದಾನದ ಬೇಡಿಕೆ: ಜನವರಿಯಲ್ಲಿ ಭೋವಿ ಸಮಾಜದ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಬೆಂಗಳೂರು: ಭೋವಿ ಸಮಾಜದ ಸಂಘಟನೆ ಬಲಪಡಿಸಿ, ಸಮಾಜದ ಹಕ್ಕುಗಳು ಮತ್ತು ಬೇಡಿಕೆಗಳ ಈಡೇರಿಕೆಗೆ ರಾಜ್ಯಮಟ್ಟದಲ್ಲಿ ದೊಡ್ಡ...