Home ಚಿತ್ರದುರ್ಗ ಪೌರಕಾರ್ಮಿಕರಿಗೆ ಸಚಿವ ಕೃಷ್ಣ ಬೈರೇಗೌಡ ಅವಮಾನ: ಕ್ಷಮೆಯಾಚಿಸದಿದ್ದರೆ ಕಪ್ಪುಬಟ್ಟೆ ಪ್ರದರ್ಶನದ ಎಚ್ಚರಿಕೆ ನೀಡಿದ ಜಿ.ಎಚ್. ಮೋಹನ್ ಕುಮಾರ್
ಚಿತ್ರದುರ್ಗ

ಪೌರಕಾರ್ಮಿಕರಿಗೆ ಸಚಿವ ಕೃಷ್ಣ ಬೈರೇಗೌಡ ಅವಮಾನ: ಕ್ಷಮೆಯಾಚಿಸದಿದ್ದರೆ ಕಪ್ಪುಬಟ್ಟೆ ಪ್ರದರ್ಶನದ ಎಚ್ಚರಿಕೆ ನೀಡಿದ ಜಿ.ಎಚ್. ಮೋಹನ್ ಕುಮಾರ್

Share
Share

ಚಿತ್ರದುರ್ಗ: ಮ್ಯಾನ್‍ಹೋಲ್ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆಯನ್ನು ಸಂಪೂರ್ಣ ಯಾಂತ್ರೀಕರಣಗೊಳಿಸಿ, ಮಾನವ ಜೀವವನ್ನು ಅಪಾಯಕ್ಕೆ ತಳ್ಳುವ ಪದ್ಧತಿಗೆ ಶಾಶ್ವತ ಅಂತ್ಯ ಹಾಡಬೇಕು. ಇಂತಹ ಗಂಭೀರ ಸಮಸ್ಯೆಗಳ ನಡುವೆ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮನವಿ ಮಾಡಲು ಬಂದ ಪೌರಕಾರ್ಮಿ ಕರನ್ನೇ “ಶೇ.30ರಷ್ಟು ಗೈರುಹಾಜರಾಗುತ್ತೀರಿ, ನಿಮ್ಮನ್ನು ಯಾಕೆ ಖಾಯಂ ಮಾಡಬೇಕು?” ಎಂಬ ರೀತಿಯಲ್ಲಿ ಸಚಿವ ಕೃಷ್ಣ ಬೈರೇಗೌಡರು ಪ್ರಶ್ನಿಸಿರುವುದು ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ. ಎಚ್. ಮೋಹನ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಕರ್ನಾಟಕದ ನಗರಗಳನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರು ಹಲವು ವರ್ಷಗಳಿಂದ ಉದ್ಯೋಗ ಭದ್ರತೆ, ಸಮರ್ಪಕ ವೇತನ ಪಿಎಫ್ ಮತ್ತು ಇಎಸ್‍ಐ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತಾ ಸೌಲಭ್ಯಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ, ವೇತನ ವಿಳಂಬ, ಸಾಮಾಜಿಕ ಭದ್ರತೆಯ ಕೊರತೆ, ಆರೋಗ್ಯ ಸಮಸ್ಯೆಗಳು ಹಾಗೂ ಕೆಲಸದ ವೇಳೆ ಎದುರಾಗುವ ಅಪಾಯಗಳು ಇನ್ನೂ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಪ್ರತಿದಿನ ಕಸ, ಧೂಳು, ವಿಷಕಾರಿ ತ್ಯಾಜ್ಯ, ಒಳಚರಂಡಿ ಹಾಗೂ ಅಪಾಯಕಾರಿ ಪರಿಸ್ಥಿತಿಗಳ ನಡುವೆ ದುಡಿಯುವ ಪೌರಕಾರ್ಮಿಕರಿಗೆ ಗುಣಮಟ್ಟದ ಬ್ರೌಸ್, ಮಾಸ್ಕ್, ಗಮ್ಬಬೂಟ್, ಸುರಕ್ಷತಾ ಉಡುಪು, ಆರೋಗ್ಯ ತಪಾಸಣೆ ಮತ್ತು ವಿಮಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಮ್ಯಾನ್‍ಹೋಲ್ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆಯನ್ನು ಸಂಪೂರ್ಣ ಯಾಂತ್ರೀಕರಣಗೊಳಿಸಿ, ಮಾನವ ಜೀವವನ್ನು ಅಪಾಯಕ್ಕೆ ತಳ್ಳುವ ಪದ್ಧತಿಗೆ ಶಾಶ್ವತ ಅಂತ್ಯ ಹಾಡಬೇಕು. ಇಂತಹ ಗಂಭೀರ ಸಮಸ್ಯೆಗಳ ನಡುವೆ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮನವಿ ಮಾಡಲು ಬಂದ ಪೌರಕಾರ್ಮಿಕರನ್ನೇ “ಶೇ.30ರಷ್ಟು ಗೈರುಹಾಜರಾಗುತ್ತೀರಿ, ನಿಮ್ಮನ್ನು ಯಾಕೆ ಖಾಯಂ ಮಾಡಬೇಕು?” ಎಂಬ ರೀತಿಯಲ್ಲಿ ಸಚಿವ ಕೃಷ್ಣ ಬೈರೇಗೌಡರು ಪ್ರಶ್ನಿಸಿರುವುದು ಅತ್ಯಂತ ಖಂಡನೀಯ. ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಬೇಕಾದ ಸಚಿವರು, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ ಕಾರ್ಮಿಕರನ್ನೇ ಅವಮಾನಿ ಸುವುದು ಅಧಿಕಾರದ ದರ್ಪವನ್ನು ತೋರಿಸುತ್ತದೆ ಎಂದು ದೂರಿದ್ದಾರೆ.

ಪೌರಕಾರ್ಮಿಕರು ಕೇವಲ ಕಸ ಎತ್ತುವ ಕಾರ್ಮಿಕರಲ್ಲ; ಅವರು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ಮುಂಚೂಣಿ ಸೇವಕರು. ಅವರ ಶ್ರಮದಿಂದಲೇ ನಮ್ಮ ನಗರಗಳು ಸ್ವಚ್ಛವಾಗಿರುತ್ತವೆ. ಆದ್ದರಿಂದ ಸಚಿವ ಕೃಷ್ಣ ಬೈರೇಗೌಡರು ತಮ್ಮ ಹೇಳಿಕೆಯನ್ನು ಹಿಂಪಡೆದು ಪೌರಕಾರ್ಮಿಕರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು. ಜೊತೆಗೆ ಉದ್ಯೋಗ ಖಾಯಂಯಾತಿ, ಸಮಯಕ್ಕೆ ಸರಿಯಾದ ವೇತನ, ಪಿಎಫ್ ಮತ್ತು ಇಎಸ್‍ಐ ಆರೋಗ್ಯ ರಕ್ಷಣೆ, ಸುರಕ್ಷತಾ ಸಾಧನಗಳು ಹಾಗೂ ಗೌರವಯುತ ಕೆಲಸದ ವಾತಾವರಣವನ್ನು ಸರ್ಕಾರ ಖಾತ್ರಿಪಡಿಸ ಬೇಕು. ಸಚಿವರು ಕ್ಷಮೆಯಾಚಿಸದಿದ್ದರೆ, ಪೌರಕಾರ್ಮಿಕರ ಆತ್ಮಗೌರವ ಮತ್ತು ನ್ಯಾಯಯುತ ಹಕ್ಕುಗಳಿಗೆ ಬೆಂಬಲವಾಗಿ ಕಪ್ಪು ಬಟ್ಟೆ ಪ್ರದರ್ಶನದ ಮೂಲಕ ಪ್ರತಿಭಟನೆಯ ಎಚ್ಚರಿಕೆಯನ್ನು ಜಿ.ಎಚ್ ಮೋಹನ್ ಕುಮಾರ್ ನೀಡಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...