ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) 2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಲ್ಲಿಯವರೆಗೆ ಬೆಂಗಳೂರು ನಗರ ಪೊಲೀಸ್‌ನ ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ (DCP – Administration) ಸೇವೆ ಸಲ್ಲಿಸುತ್ತಿದ್ದ ಕುಶಾಲ್ ಚೌಕ್ಸೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಹಾಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಂಜಿತ್ ಕುಮಾರ್ ಬಂಡಾರು (IPS) ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಕುಶಾಲ್ ಚೌಕ್ಸೆ ಅವರನ್ನು ನಿಯೋಜಿಸಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
-
ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.
ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.
ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.