Home ಚಿತ್ರದುರ್ಗ ಶೋಷಿತರು ಆರ್‌ಸಿಸಿ ಕಟ್ಟಡಗಳಂತೆ ದೃಢವಾಗಿರಬೇಕು: ಡಾ. ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ
ಚಿತ್ರದುರ್ಗ

ಶೋಷಿತರು ಆರ್‌ಸಿಸಿ ಕಟ್ಟಡಗಳಂತೆ ದೃಢವಾಗಿರಬೇಕು: ಡಾ. ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ

Share
ಡಾ. ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ
Share

ಚಿತ್ರದುರ್ಗ (ಸೆ. 30): ಶೋಷಿತ ಸಮುದಾಯಗಳು ಹಳೆಯ ವ್ಯವಸ್ಥೆಯ ಶೋಷಣೆಯಿಂದ ಹೊರಬಂದು, ಸಮಾಜದಲ್ಲಿ ಆರ್‌ಸಿಸಿ (RCC) ಕಟ್ಟಡಗಳಂತೆ ಅತ್ಯಂತ ದೃಢವಾಗಿ ಹೊರಹೊಮ್ಮಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಮಾದಾರ ಗುರು ಪೀಠದ ಡಾ. ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಕರೆ ನೀಡಿದರು.

ನಗರದಲ್ಲಿ ಆಯೋಜಿಸಲಾಗಿದ್ದ ಬೃಹತ್ ಮಾದಿಗ ಕಾರ್ಯಕರ್ತರ ಸಮಾವೇಶದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಕೊಡುಗೆ ಅಪಾರವಾಗಿದೆ ಎಂದು ಬಣ್ಣಿಸಿದರು.

ಬಿ.ಎಸ್.ವೈ, ಬೊಮ್ಮಾಯಿ ಕೊಡುಗೆ ಸ್ಮರಣೀಯ ಮಾದಿಗ ಸಮುದಾಯ ಸೇರಿದಂತೆ 101 ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಂಡು, ಒಳಮೀಸಲಾತಿಗೆ ಹೆಚ್ಚಿನ ಶ್ರಮ ಮತ್ತು ಅನುದಾನ ನೀಡಿದ ಮೊದಲ ಕೀರ್ತಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ ಎಂದು ಶ್ಲಾಘಿಸಿದರು.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಷಿತ ಸಮುದಾಯಗಳಿಗೆ ಬರೋಬ್ಬರಿ 100 ಕೋಟಿ ರೂಪಾಯಿಗಳ ಅನುದಾನದ ಆದೇಶ ಹೊರಡಿಸುವ ಮೂಲಕ ಮಠ-ಮಾನ್ಯಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸ್ವಂತ ಜಮೀನು ಹಾಗೂ ಸ್ಮಶಾನಕ್ಕೂ ಜಾಗವಿಲ್ಲದೆ ಹೋರಾಟ ಮಾಡುತ್ತಿದ್ದ ಸಮುದಾಯಕ್ಕೆ ಬೃಹತ್ ಮಠ ನಿರ್ಮಾಣ ಮಾಡಲು 83 ಎಕರೆ ಜಮೀನನ್ನು ಮಂಜೂರು ಮಾಡಿ ಭೂಮಿಪೂಜೆಗೆ ಸಂಕಲ್ಪ ತೊಟ್ಟ ಬೊಮ್ಮಾಯಿ ಅವರ ಕೊಡುಗೆಯನ್ನು ಅತ್ಯಂತ ಗೌರವದಿಂದ ಸ್ಮರಿಸುವುದಾಗಿ ಸ್ವಾಮೀಜಿ ನುಡಿದರು.

ಶೋಷಿತ ಸಮುದಾಯಗಳು ಇನ್ನೊಬ್ಬರ ಮೇಲೆ ಅವಲಂಬಿತರಾಗದೆ, ಶಿಕ್ಷಣ ಹಾಗೂ ಸಂಘಟನೆಯ ಮೂಲಕ ಗಟ್ಟಿಯಾಗಿ ನಿಲ್ಲಬೇಕು. ಅಂದಾಗ ಮಾತ್ರ ಸಮುದಾಯದ ಏಳಿಗೆ ಸಾಧ್ಯ ಎಂದು ಅವರು ಸಭಿಕರಿಗೆ ಕಿವಿಮಾತು ಹೇಳಿದರು.

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...