Home ಅಪರಾಧ ಚಿತ್ರದುರ್ಗ: ಅಪ್ರಾಪ್ತ ಮಗಳ ಮೇಲೆ ದೌರ್ಜನ್ಯ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಅಪರಾಧ

ಚಿತ್ರದುರ್ಗ: ಅಪ್ರಾಪ್ತ ಮಗಳ ಮೇಲೆ ದೌರ್ಜನ್ಯ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Share
Share

ಚಿತ್ರದುರ್ಗ: ಹೆತ್ತ ಮಗಳನ್ನೇ ಕಾಮದ ಕಣ್ಣಿನಿಂದ ನೋಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಈ ಕೃತ್ಯ 2025ರಲ್ಲಿ ನಡೆದಿದ್ದು, ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು. ಸ್ನೇಹಿತೆಯ ಹುಟ್ಟುಹಬ್ಬಕ್ಕೆ ಕರೆದೊಯ್ಯುವ ನೆಪದಲ್ಲಿ ಅಪ್ರಾಪ್ತ ಮಗಳನ್ನು ಕರೆದೊಯ್ದು ತಂದೆಯೇ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖಾಧಿಕಾರಿ ಮಹಿಳಾ ಠಾಣೆ ಸಿಪಿಐ ನಯೂಮ್ ಅವರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕ ಜಗದೀಶ್ ವಾದ ಮಂಡಿಸಿದ್ದರು.

ವಿಚಾರಣೆ ನಡೆಸಿದ ಚಿತ್ರದುರ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ್ ಅವರು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Author

Share

Loading News...

More News

Related Articles

ಚಿತ್ರದುರ್ಗ ಕ್ರೈಂ ನ್ಯೂಸ್: ಬೊಮ್ಮನಕಟ್ಟೆ ಬಳಿ ನಡೆದಿದ್ದ ಮಹಿಳೆಯ ಭೀಕರ ಕೊಲೆ ರಹಸ್ಯ ಬಯಲು!

ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಗೋಮಾಳ ಜಾಗದಲ್ಲಿ 25 ರಿಂದ 30 ವರ್ಷ ವಯಸ್ಸಿನ ಮಹಿಳೆಯೊಬ್ಬಳನ್ನು...

ಹೊಳಲ್ಕೆರೆ: ಜಮೀನಿನ ಗುಡಿಸಲಿನಲ್ಲಿ ವೃದ್ಧನ ಶವ ಪತ್ತೆ; ಕೊಲೆ ಶಂಕೆ

ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ...

ಈರಜ್ಜನಹಟ್ಟಿ ಸಮೀಪ ಯುವಕನ ಕೊಲೆ ಶಂಕೆ: ಮುಖ ಗುರುತು ಸಿಗದಂತೆ ಹಲ್ಲೆ

ಚಿತ್ರದುರ್ಗ: ತಾಲೂಕಿನ ಈರಜ್ಜನಹಟ್ಟಿ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಡಿರುವ ಶಂಕೆ...

ಚಿತ್ರದುರ್ಗ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಎಸಿ ಕಚೇರಿಯ ಎಫ್‌ಡಿಎ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC)...