Home ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಗಳ ಜಾಗೃತಿಗೆ ಮಠಾಧೀಶರ ದುಂಡುಮೇಜಿನ ಸಭೆ
Home

ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಗಳ ಜಾಗೃತಿಗೆ ಮಠಾಧೀಶರ ದುಂಡುಮೇಜಿನ ಸಭೆ

Share
Share

ಚಿತ್ರದುರ್ಗ: ಮದ್ಯಪಾನ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ವ್ಯಾಪಕ ಅರಿವು ಮೂಡಿಸಲು ರಾಜ್ಯದ ಮಠಾಧೀಶರ ನೇತೃತ್ವದಲ್ಲಿ ದುಂಡುಮೇಜಿನ ಸಭೆ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಚರ್ಚಿಸಲು ಇದೇ ಸೆಪ್ಟೆಂಬರ್ 23ಕ್ಕೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶ್ರೀಮಠದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿನಲ್ಲಿ ಸಮಾಜಮುಖಿ ಚಿಂತನೆಯುಳ್ಳ ಮಠಾಧೀಶರ ಮಾತುಗಳಿಗೆ ಜನರ ಮೇಲೆ ಅಪಾರ ಪ್ರಭಾವವಿದೆ. ಅವರ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಎಂದರು.

ಸೆಪ್ಟೆಂಬರ್ 23ರಂದು ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀಗಳ ಸಮ್ಮುಖದಲ್ಲಿ ದುಂಡುಮೇಜಿನ ಪೂರ್ವಭಾವಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಬೃಹತ್ ಪ್ರಮಾಣದಲ್ಲಿ ಆಯೋಜಿಸಲು ಉದ್ದೇಶಿಸಿರುವ ದುಂಡುಮೇಜಿನ ಸಭೆಯ ರೂಪುರೇಷೆ, ಕಾರ್ಯಕ್ರಮದ ಸ್ಥಳ ಹಾಗೂ ದಿನಾಂಕವನ್ನು ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ಸಭೆಗೆ ಮಂಡಳಿಯ ವತಿಯಿಂದ ರಾಜ್ಯದ ವಿವಿಧ ಮಠಾಧೀಶರಿಗೆ ಆಹ್ವಾನ ನೀಡಲಾಗುತ್ತಿದ್ದು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಮದ್ಯಮುಕ್ತ ಹಾಗೂ ಆರೋಗ್ಯಕರ ಸಮಾಜ ಕಟ್ಟುವ ಕೆಲಸ ಕೇವಲ ಸರ್ಕಾರದ ಕರ್ತವ್ಯವಷ್ಟೇ ಅಲ್ಲ, ಇದು ನಮ್ಮೆಲ್ಲರ ಜಂಟಿ ಹೊಣೆಗಾರಿಕೆಯಾಗಿದೆ. ಮುಂದಿನ ಪೀಳಿಗೆಗೆ ಆರೋಗ್ಯಪೂರ್ಣ ಹಾಗೂ ಸುಸ್ಥಿರ ವಾತಾವರಣ ಬಿಟ್ಟು ಹೋಗುವುದು ನಮ್ಮ ಕರ್ತವ್ಯ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮದ್ಯವರ್ಜನ ಶಿಬಿರಗಳ ಮೂಲಕ ಸಮಾಜದಲ್ಲಿ ತಂದಿರುವ ಬದಲಾವಣೆಯ ಮಾದರಿಯಲ್ಲೇ ರಾಜ್ಯಾದ್ಯಂತ ಈ ಜಾಗೃತಿ ಚಟುವಟಿಕೆಯನ್ನು ತೀವ್ರಗೊಳಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ರೂಪಾ, ಸಲಹೆಗಾರರಾದ ಎಂ.ಎಸ್.ನಂದೀಶ್, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ ಇದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಪುತ್ರಿಯೊಂದಿಗೆ ಕಾಮಾಕ್ಯ ದೇವಿ ದರ್ಶನ ಪಡೆದ ಶಾಸಕ ಪಪ್ಪಿ

ಗುವಾಹಟಿ: ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭಾನುವಾರ ಪುತ್ರಿಯೊಂದಿಗೆ ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಶಕ್ತಿ...

ಭದ್ರಾ ಯೋಜನೆಗೆ ಹೆಚ್. ಹನುಮಂತಪ್ಪ ಕೊಡುಗೆ ಅಪಾರ: ಚಿತ್ರದುರ್ಗದಲ್ಲಿ ನುಡಿನಮನ

ಚಿತ್ರದುರ್ಗ: ಹಿರಿಯ ರಾಜಕಾರಣಿ, ದಲಿತ ಹಾಗೂ ಹಿಂದುಳಿದ ವರ್ಗಗಳ ಗಟ್ಟಿ ಧ್ವನಿಯಾಗಿದ್ದ ಹೆಚ್. ಹನುಮಂತಪ್ಪನವರ ಅಗಲಿಕೆ...

ಚಿತ್ರದುರ್ಗದ 20ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವ: ಬೈಕ್ ರ್ಯಾಲಿ, ಶೋಭಾಯಾತ್ರೆಯ ಸಂಪೂರ್ಣ ವಿವರ

ಚಿತ್ರದುರ್ಗದಲ್ಲಿ ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಲಾಗುವ ದೇಶದ 2ನೇ ಅತಿದೊಡ್ಡ...

ಪಿಎಗಳ ಮಾತು ಕೇಳಿ ರಾಜಕೀಯ ಮುಗಿಸ್ಕೊಬೇಡ: ಬಿ. ಶ್ರೀರಾಮುಲುಗೆ ತಿಪ್ಪೇಸ್ವಾಮಿ ಖಡಕ್ ಎಚ್ಚರಿಕೆ

ಮೊಣಕಾಲ್ಮೂರು (ಚಿತ್ರದುರ್ಗ ಲೈವ್): ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಪಾಳೆಯದ ಆಂತರಿಕ ಬೇಗುದಿ ಮತ್ತೊಮ್ಮೆ ಭುಗಿಲೆದ್ದಿದೆ....