Home ಕೃಷಿ ಬಯಲು ಸೀಮೆಗೆ ಹರಿದ ಭದ್ರಾ ಜೀವಜಲ, ಸೆ.24ರಂದು ಗಂಗಾಪೂಜೆ: ಎನ್.ಚಲುವರಾಯಸ್ವಾಮಿ
ಕೃಷಿಚಿತ್ರದುರ್ಗ

ಬಯಲು ಸೀಮೆಗೆ ಹರಿದ ಭದ್ರಾ ಜೀವಜಲ, ಸೆ.24ರಂದು ಗಂಗಾಪೂಜೆ: ಎನ್.ಚಲುವರಾಯಸ್ವಾಮಿ

Share
ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ ಮತ್ತು ಅಧಿಕಾರಿಗಳು
Share

ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ಬೃಹತ್ ಸಾರ್ವಜನಿಕ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ನಗರದ ದಾವಣಗೆರೆ ರಸ್ತೆಯಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿ, ಯೋಜನೆ ಮತ್ತು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡರು.

ಗ್ಯಾರಂಟಿ ಯೋಜನೆಗಳ ಜೊತೆಗೆ ನೀರಾವರಿಗೂ ಆದ್ಯತೆ

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೂ, ಆ ಎಲ್ಲಾ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಜೊತೆಯಲ್ಲೇ ಸರ್ಕಾರ ನೀರಾವರಿ ಯೋಜನೆಗಳಿಗೂ ಹೆಚ್ಚಿನ ಆದ್ಯತೆ ನೀಡಿದೆ. ಇತರ ರಾಜ್ಯಗಳು ಭರವಸೆಗಳನ್ನು ಈಡೇರಿಸಲು ಪರದಾಡುತ್ತಿದ್ದರೆ, ನಮ್ಮ ಸರ್ಕಾರ ಬರಗಾಲ ಹೊದ್ದು ಮಲಗಿದ್ದ ಚಿತ್ರದುರ್ಗಕ್ಕೆ ಭದ್ರೆಯ ನೀರು ಹರಿಸುವ ಮೂಲಕ ತನ್ನ ಬದ್ಧತೆ ಮೆರೆದಿದೆ ಎಂದು ಹೇಳಿದರು.

3 ಟಿಎಂಸಿ ನೀರು ಪ್ರಾಯೋಗಿಕ ಬಿಡುಗಡೆ: ನವೆಂಬರ್ ವೇಳೆಗೆ 17.5 ಟಿಎಂಸಿ ಲಿಫ್ಟ್ ಗುರಿ

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ನೀರನ್ನು ಪ್ರಾಯೋಗಿಕವಾಗಿ ಹರಿಸಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್-ಡಿಸೆಂಬರ್ ತಿಂಗಳ ಒಳಗೆ ತುಂಗಾ ನದಿಯಿಂದ 17.5 ಟಿಎಂಸಿ ನೀರನ್ನು ಲಿಫ್ಟ್ ಮಾಡುವ ಮೂಲಕ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಯಶಸ್ವಿಗೊಳಿಸಲು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದಕ್ಕಾಗಿ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಪಡೆದು ವಿದ್ಯುತ್ ಟವರ್‍ಗಳ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ ಎಂದರು.

ಕೇಂದ್ರದ ಅನುದಾನ ಕೊರತೆಯ ನಡುವೆಯೂ ರಾಜ್ಯ ಸರ್ಕಾರದ ₹12,000 ಕೋಟಿ ಬದ್ಧತೆ

ಈ ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಸರ್ಕಾರದ ಅಸಹಕಾರ ಎದ್ದು ಕಾಣುತ್ತಿದೆ. ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ರೂ.5,300 ಕೋಟಿ ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರವೇ ಈಗಾಗಲೇ 12 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ದಿವಂಗತ ಸಚಿವ ಡಿ. ಸುಧಾಕರ್ ಅವರ ಶ್ರಮ ಸ್ಮರಿಸಿದ ಸಚಿವರು

ಇದೇ ವೇಳೆ, ಯಾವುದೇ ಇತರ ಅಭಿವೃದ್ಧಿ ಅನುದಾನವನ್ನು ಕೇಳದೆ ಕೇವಲ ಜಿಲ್ಲೆಗೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದ ದಿವಂಗತ ಸಚಿವ ಡಿ. ಸುಧಾಕರ್ ಅವರ ಕಳಕಳಿಯನ್ನು ಸಚಿವ ಚಲುವರಾಯಸ್ವಾಮಿ ಅವರು ಸ್ಮರಿಸಿಕೊಂಡರು.

ಇತಿಹಾಸ ನಿರ್ಮಾಣವಾಗುವ ಐತಿಹಾಸಿಕ ಸಂದರ್ಭ

ಸೆಪ್ಟೆಂಬರ್ 24ರಂದು ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮವು ಈ ಭಾಗದ ಜನರ ದಶಕಗಳ ಕನಸು ನನಸು ಮಾಡುವ ಹಾಗೂ ಹೊಸ ಇತಿಹಾಸ ನಿರ್ಮಿಸುವ ಅತ್ಯಂತ ಮಹತ್ವದ ಸಂದರ್ಭವಾಗಿದೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದರು. ಗಂಗಾಪೂಜೆ ಕಾರ್ಯಕ್ರಮವು ಸರ್ಕಾರದ ಈ ಸಾಧನೆಯ ಕೈಗನ್ನಡಿಯಾಗಲಿದ್ದು, ಇದನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದ ಸಚಿವರು, ಶಿಷ್ಟಾಚಾರ ಉಲ್ಲಂಘನೆಯಾಗದಂತೆ, ಸಾರ್ವಜನಿಕರಿಗೆ ಯಾವುದೇ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ತಿಳಿಸಿದರು.

ವೇದಿಕೆಯ ಮುಂಭಾಗದ ಜನರಿಗೆ ಗಂಗಾಪೂಜೆಯ ನೇರ ಪ್ರಸಾರ ಒದಗಿಸುವುದು, ಸುಸಜ್ಜಿತ ಊಟದ ವ್ಯವಸ್ಥೆ ಹಾಗೂ ಸಾರ್ವಜನಿಕರ ಸುಗಮ ಪ್ರವೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳನ್ನು ಲೋಪದೋಷವಿಲ್ಲದಂತೆ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಗಣ್ಯರು ಹಾಗೂ ಅಧಿಕಾರಿಗಳ ತಂಡ

ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕುಡಾ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಹೆಚ್.ಸಿ.ರಮೇಂದ್ರ, ಮುಖ್ಯ ಇಂಜಿನಿಯರ್ ರವಿಶಂಕರ್ ಸೇರಿದಂತೆ ಮತ್ತಿತರರು ಇದ್ದರು.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...