Home ಚಳ್ಳಕೆರೆ ಮಂತ್ರಾಲಯಕ್ಕೆ ಹೊರಟಿದ್ದ ವಾಹನ ಪಲ್ಟಿ: ಹಲವರಿಗೆ ಗಂಭೀರ ಗಾಯ
ಚಳ್ಳಕೆರೆ

ಮಂತ್ರಾಲಯಕ್ಕೆ ಹೊರಟಿದ್ದ ವಾಹನ ಪಲ್ಟಿ: ಹಲವರಿಗೆ ಗಂಭೀರ ಗಾಯ

Share
Share

ಚಳ್ಳಕೆರೆ: ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟಿಟಿ ವಾಹನ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮಹಿಳೆಯರು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ತಾಲ್ಲೂಕಿನ ಹಿರೇಹಳ್ಳಿ ಸಮೀಪ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಹೊನ್ನೂರು ಗ್ರಾಮದ ನಾಗರಾಜ್ ಸೇರಿದಂತೆ ಸುಮಾರು 12 ಮಂದಿ ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಶನಿವಾರ ರಾತ್ರಿ 11ರ ಸುಮಾರಿಗೆ ಚಾಮರಾಜನಗರದಿಂದ ಮಂತ್ರಾಲಯಕ್ಕೆ ಹೊರಟಿದ್ದ ವಾಹನವು ಭಾನುವಾರ ಮುಂಜಾನೆ 3.15 ರ ಸುಮಾರಿಗೆ ಹಿರೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದಲ್ಲಿ ನವ್ಯ, ದಿವ್ಯ, ಪುಟ್ಟಮ್ಮ, ಶಮಿತಾ, ಲತಾ, ಯೋಶಿಕಾ, ಹೇಮಲತಾ, ಅಮೃತ, ಸೌಮ್ಯ, ಮೊದಲಾಂಬಿಕೆ, ಮೋಹನ್, ನಾಗರಾಜ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ
ಬಳಿಕ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಕು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಜಪಾನ್ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಳ್ಳಕೆರೆಯ ವಿ. ರಾಧಾ ಆಯ್ಕೆ: 1,500 ಮೀಟರ್ ಓಟದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಅಥ್ಲೀಟ್

ಚಿತ್ರದುರ್ಗ: ಜಪಾನ್‌ನಲ್ಲಿ ಅಕ್ಟೋಬರ್ 17 ರಿಂದ 26 ರವರೆಗೆ ನಡೆಯಲಿರುವ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಿತ್ರದುರ್ಗ...

ಚಿತ್ರದುರ್ಗದಲ್ಲಿ ಭೀಕರ ಬರ: ಹಿರಿಯೂರು, ಚಳ್ಳಕೆರೆ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ರೈತರ ಕಣ್ಣೀರು

ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ...

ನಾಯಕನಹಟ್ಟಿ: ನಕಲಿ ಚಿನ್ನ, ಅಸಲಿ ನಷ್ಟ: ತೆಲಂಗಾಣದ ವ್ಯಕ್ತಿಗೆ 10 ಲಕ್ಷ ರೂ. ವಂಚನೆ

ಚಿತ್ರದುರ್ಗ (Chitradurga Live): ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ತೆಲಂಗಾಣ ಮೂಲದ ವ್ಯಕ್ತಿಯೊಬ್ಬರಿಗೆ ನಕಲಿ...

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆ ವೇಳೆ ನಗರದ ಬೀದಿಗಳಲ್ಲಿ ಡ್ಯಾನ್ಸ್ ಮಾಡಿದ ಶಿಕ್ಷಕರಿಗೆ ಕೂಡಲೇ ನೋಟಿಸ್...