Home ಹಿರಿಯೂರು ಸೆ.17 ರಿಂದ ವಿ.ವಿ.ಸಾಗರ ಬಲದಂಡೆ ನಾಲೆಗೆ ನೀರು ಬಿಡುಗಡೆ: ಕಾಲುವೆ, ಹಳ್ಳಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ
ಹಿರಿಯೂರು

ಸೆ.17 ರಿಂದ ವಿ.ವಿ.ಸಾಗರ ಬಲದಂಡೆ ನಾಲೆಗೆ ನೀರು ಬಿಡುಗಡೆ: ಕಾಲುವೆ, ಹಳ್ಳಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ

Share
Share

ಚಿತ್ರದುರ್ಗ ಸೆ.16: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ಬಲದಂಡೆ ನಾಲೆಯ ಮೂಲಕ ಸುವರ್ಣಮುಖಿ ನದಿಯ 4 ಚೆಕ್ ಡ್ಯಾಂಗಳಿಗೆ ಸೆಪ್ಟೆಂಬರ್ 17 ರಿಂದ 0.10 ಟಿ.ಎಂ.ಸಿ ನೀರನ್ನು ಹರಿಸಲಾಗುತ್ತದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ, ಕುಂದಲಗುರ ಬಳಿಯ ವಿತರಣಾ ತೊಟ್ಟಿಯಿಂದ ನದಿಗೆ ನೀರನ್ನು ಹರಿಸಲು ಅಗತ್ಯ ಕ್ರಮ ವಹಿಸಲಾಗಿದೆ.

ಸಾರ್ವಜನಿಕ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಕಾಲುವೆ, ಚೆಕ್ ಡ್ಯಾಂ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ-ಜಾನುವಾರುಗಳನ್ನು ಇಳಿಸುವುದು, ಈಜಾಡುವುದು ಅಥವಾ ಇನ್ನಿತರ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ನೀರಾವರಿ ಕಾಲುವೆ ಅಥವಾ ಕಟ್ಟಡಗಳನ್ನು ಹಾನಿಗೊಳಿಸುವುದು ಮತ್ತು ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರು ಎತ್ತುವುದು ನೀರಾವರಿ ಕಾಯ್ದೆಯಡಿ ಅಪರಾಧವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಅಧೀಕ್ಷಕ ಎಂಜಿನಿಯರ್ ಎಚ್ಚರಿಸಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ: ಟೈರ್ ಸ್ಫೋಟಗೊಂಡು ಲಾರಿಗೆ ಕಾರು ಡಿಕ್ಕಿ, ಮೂವರು ಯುವಕರ ದುರ್ಮರಣ

ಹಿರಿಯೂರು: ಲಾರಿಯ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ...

ಚಿತ್ರದುರ್ಗದಲ್ಲಿ ಭೀಕರ ಬರ: ಹಿರಿಯೂರು, ಚಳ್ಳಕೆರೆ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ರೈತರ ಕಣ್ಣೀರು

ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ...

ಹಿರಿಯೂರಿನ ಸೂರಗೊಂಡಹಳ್ಳಿ, ತವಂದಿ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ ಪರಿಶೀಲನೆ

ಚಿತ್ರದುರ್ಗ (ಸೆ.20): ಚಿತ್ರದುರ್ಗ ಜಿಲ್ಲೆಯ ರೈತರ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ಭರದಿಂದ...

ವಿವಿ ಸಾಗರದಿಂದ ವೇದಾವತಿ ನದಿಗೆ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಹೈ ಅಲರ್ಟ್!

ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ (ವಿ.ವಿ. ಸಾಗರ) ಜಲಾಶಯದಿಂದ ವೇದಾವತಿ ನದಿಗೆ ಸೆಪ್ಟೆಂಬರ್ 19ರಿಂದ...